ಮೋದಿ ಸರ್ಕಾರ ಎಲ್ಲ ಇತಿಮಿತಿಗಳನ್ನು ಮೀರಿ ವರ್ತಿಸುತ್ತಿದೆ : ಮನಮೋಹನ್ ಸಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

Band--05
ನವದೆಹಲಿ, ಸೆ.10 (ಪಿಟಿಐ)- ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಪ್ರಜಾಪ್ರಭುತ್ವ ಉಳಿಸಲು ಎಲ್ಲ ವಿರೋಧಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಗ್ಗೂಡಬೇಕೆಂದು ಕರೆ ನೀಡಿದ್ದಾರೆ. ಕೇಂದ್ರ ಸರ್ಕಾರವು ದೇಶದ ಹಿತಾಸಕ್ತಿಗೆ ವಿರುದ್ಧವಾದ ಎಲ್ಲವನ್ನೂ ಮಾಡಿದ್ದು, ಅದು ಎಲ್ಲ ಇತಿಮಿತಿಗಳನ್ನು ದಾಟಿದೆ ಎಂದು ಮೋದಿ ವಿರುದ್ಧ ಡಾ. ಸಿಂಗ್ ಹರಿಹಾಯ್ದರು.

ಕೇಂದ್ರ ಸರ್ಕಾರದ ಇಂಧನ ಬೆಲೆ ನೀತಿ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ 21 ರಾಜಕೀಯ ಪಕ್ಷಗಳು ದೆಹಲಿಯಲ್ಲಿ ಇಂದು ಹಮ್ಮಿಕೊಂಡಿದ್ದ ಭಾರತ್ ಬಂದ್ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎನ್‍ಡಿಎ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿದರು. ಇಂಥ ಸನ್ನಿವೇಶದಲ್ಲಿ ಭಾರತವನ್ನು ರಕ್ಷಿಸಬೇಕಿದೆ. ದೇಶದ ಪ್ರಜಾಪ್ರಭುತ್ವ ಉಳಿಸಲು ಎಲ್ಲ ವಿರೋಧಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಒಗ್ಗೂಡಬೇಕು ಎಂದು ಮಾಜಿ ಪ್ರಧಾನಿ ಮನವಿ ಮಾಡಿದರು.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆಯೇ ಬಂದ್ ನೇತೃತ್ವ ವಹಿಸಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಬೃಹತ್ ಪ್ರತಿಭಟನಾಕಾರರೊಂದಿಗೆ ರಾಹುಲ್ ಮತ್ತು ವಿವಿಧ ವಿರೋಧ ಪಕ್ಷಗಳ ನಾಯಕರು ರಾಜ್‍ಘಾಟ್‍ನಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಸಮಾಧಿಗೆ ಪುಷ್ಪನಮನ ಸಲ್ಲಿಸಿ ರಾಮ್‍ಲೀಲಾ ಮೈದಾನಕ್ಕೆ ಕಾಲ್ನಡಿಗೆ ಮೂಲಕ ತೆರಳಿದರು. ನಂತರ ಅಲ್ಲಿ ಸಮಾವೇಶಗೊಂಡ ಕಾಂಗ್ರೆಸ್ ಮುಖಂಡರು ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ನೀತಿಗಳನ್ನು ಕಟುವಾಗಿ ಟೀಕಿಸಿದರು.

ರಾಹುಲ್ ಟೀಕಾ ಪ್ರಹಾರ : ಬೃಹತ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಮೋದಿ ನೇತೃತ್ವದ ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ. ರೈತರು ಮತ್ತು ಯುವ ಜನಾಂಗದ ಹಿತರಕ್ಷಿಸುವಲ್ಲಿ ಕೇಂಧ್ರ ವಿಫಲವಾಗಿದೆ. ಪ್ರಧಾನಿ ನೀಡಿದ ಭರವಸೆಗಳು ಈಡೇರಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.

Facebook Comments

Sri Raghav

Admin