15 ದಿನಗಳಲ್ಲಿ ಏನು ಬೇಕಾದರೂ ನಡೆಯಬಹುದು ..!

ಈ ಸುದ್ದಿಯನ್ನು ಶೇರ್ ಮಾಡಿ

Satish-Jarakihole

ಬೆಂಗಳೂರು. ಸೆ.11 : ರಾಜ್ಯ ರಾಜಕೀಯದಲ್ಲಿ ಮುಂದಿನ 15 ದಿನಗಳಲ್ಲಿ ಏನು ಬೇಕಾದರೂ ಆಗಹಬಹುದು ಅದಕ್ಕೆ ನಾನು ಹೊಣೆಯಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು, ಬಿಜೆಪಿ ಸೇರುವುದಿಲ್ಲ, ಇರುವ ಸಮಸ್ಯೆಗಳ ಬಗ್ಗೆ ಹೈಕಮಾಂಡ್ ಗೆ ತಿಳಿಸಿದ್ದೇವೆ, ಅವರೇ ಸಮಸ್ಯೆ ಬಗಹರಿಸುತ್ತಾರೆ ಎಂದು ಹೇಳಿದ್ದಾರೆ. ವರಿಷ್ಟರು ಬೆಳಗಾವಿ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು, ರಾಜ್ಯ ನಾಯಕರು ಹಾಗೂ ಹೈಕಮಾಂಡ್ ಈ ಸಮಸ್ಯೆ ಬಗೆ ಹರಿಸಬೇಕು ಎಂದು ತಿಳಿಸಿದ್ದಾರೆ.

ಶ್ರೀರಾಮುಲು ಜೊತೆ ನಿರಂತರ ಸ್ ನಿರಂತರ ಸಂಪರ್ಕದಲ್ಲಿದ್ದೀರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾರೋಂದಿಗೂ ಮಾತನಾಡಿಲ್ಲ ಎಂದರು.
ರಮೇಶ್ ಜಾರಕಿಹೊಳಿ ಜೊತೆ 14 ಮಂದಿ ಶಾಸಕರು ಇದ್ದಾರಲ್ಲಿ ಎಂಬ ಪ್ರಶ್ನೆಗ ಉತ್ತರಿಸಿದ ಅವರು, ಸರ್ಕಾರ ರಚನೆಯಾದಾಗಿನಿಂದ ಅವರ ಜೊತೆಗಿದ್ದಾರೆ ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ.

ಡಿ.ಕೆ ಶಿವಕುಮಾರ್ ಅವರ ವಿರುದ್ಧ ಅಸಮಾಧಾನಕ್ಕೆ ಕಾರಣವಿದೆ, ಅವರು ಜಿಲ್ಲೆಯ ರಾಜಕೀಯ ಮತ್ತು ವರ್ಗಾವಣೆ ವಿಷಯದಲ್ಲಿ ಹಸ್ತಕ್ಷೇಪ ಮಾಡಿದ್ದರು ಹೀಗಾಗಿ ಅವರ ವಿರುದ್ದ ಕೋಪವಿದೆ ಎಂದು ಹೇಳಿದ್ದಾರೆ,  ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರವಾಗಿ ಜಾರಕಿಹೊಳಿ ಸಹೋದರರಿಗೆ ಪಕ್ಷದಲ್ಲಿ ಹಿನ್ನಡೆಯಾದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದರು.

# 16 ರಂದು ತೀರ್ಮಾನ ಪ್ರಕಟ :

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಬಹಿರಂಗವಾಗಿಯೇ ತೊಡೆ ತಟ್ಟಿರುವ ಬೆಳಗಾವಿಯ ಜಾರಕಿ ಹೊಳಿ ಸಹೋದರರು ತಮ್ಮ ಮುಂದಿನ ರಾಜಕೀಯ ನಿರ್ಧಾರ ಕುರಿತಂತೆ ಇದೇ 16 ರಂದು ತೀರ್ಮಾನ ಪ್ರಕಟಿಸುವುದಾಗಿ ಹೇಳಿರುವುದರಿಂದ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರಕ್ಕೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ವಿದೇಶಿ ಪ್ರವಾಸದಲ್ಲಿರುವ ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಭಾನುವಾರ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಸಚಿವ ರಮೇಶ್ ಜಾರಕಿ ಹೊಳಿ ಹೇಳಿದ್ದಾರೆ. ಈ ಬೆಳವಣಿಗೆಗಳಿಂದ ಕಾಂಗ್ರೆಸ್‍ನಲ್ಲಿ ಮಿಂಚಿನ ಸಂಚಲನ ಉಂಟಾಗಿದೆ.

ಇತ್ತ ಕಾಂಗ್ರೆಸ್‍ನಲ್ಲಿರುವ ಅತೃಪ್ತ ಶಾಸಕರನ್ನು ಸೆಳೆಯಲು ಬಿಜೆಪಿ ಕೂಡ ಸಜ್ಜಾಗಿದ್ದು, 14 ಶಾಸಕರನ್ನು ಅಪರೇಷನ್ ನಡೆಸಲು ಮುಂದಾಗಿದೆ ಎಂಬ ವದಂತಿ ಹಬ್ಬಿದೆ. ಇದಕ್ಕೆ ಪುಷ್ಟಿ ನೀಡುವಂತೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ಆಪ್ತರೊಂದಿಗೆ ಗೌಪ್ಯವಾಗಿ ಮಾತುಕತೆ ನಡೆಸಿರುವುದು ಹಲವು ಊಹಾಪೋಹಗಳನ್ನು ಹುಟ್ಟುಹಾಕಿದೆ. ಮಂಗಳವಾರ ದಿನಪೂರ್ತಿ ನಡೆದ ಬೆಳವಣಿಗೆಗಳಲ್ಲಿ ಜಾರಕಿ ಹೊಳಿ ಸಹೋದರರು ಹಾಗೂ ಯಡಿಯೂರಪ್ಪ ನಿವಾಸ ರಾಜ್ಯ ರಾಜಕಾರಣದ ಕೇಂದ್ರಬಿಂದುವಾಗಿತ್ತು. ತಮ್ಮ ನಿವಾಸದಲ್ಲಿ ಆಪ್ತ ಶಾಸಕರ ಜೊತೆ ಮಾತುಕತೆ ನಡೆಸಿದ ರಮೇಶ್ ಜಾರಕಿ ಹೊಳಿ ಪಕ್ಷ ಬಿಡುವ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ. ಇನ್ನು ಅವರ ಸಹೋದರ ಸತೀಶ್ ಜಾರಕಿ ಹೊಳಿ ಕೂಡ ಇದೇ ಅಡ್ಡಗೋಡೆ ದೀಪವಿಟ್ಟಂತೆ ಮಾತನಾಡಿದ್ದಾರೆ. ಹದಿನೈದು ದಿನದಲ್ಲಿ ಏನು ಬೇಕಾದರೂ ಆಗಬಹುದು ಎನ್ನುವ ಮೂಲಕ ಕುತೂಹಲ ಕೆರಳಿಸಿದ್ದಾರೆ.

Facebook Comments

Sri Raghav

Admin