ಸ್ವಲ್ಪ ಕಾದು ನೋಡಿ ಬಿಜೆಪಿಯವರೇ ರಾಜೀನಾಮೆ ಕೊಡ್ತಾರೆ : ಸಿಎಂ ಹೊಸ ಬಾಂಬ್

ಈ ಸುದ್ದಿಯನ್ನು ಶೇರ್ ಮಾಡಿ

CM-Kumaraswamy
ಮಂಡ್ಯ, ಸೆ.11-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬಿದ್ದೇ ಹೋಯ್ತು ಎಂಬ ರೀತಿ ಸುದ್ದಿಗಳು ಬಿತ್ತರವಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸ್ವಲ್ಪ ದಿನ ಕಾದು ನೋಡಿ ಬಿಜೆಪಿಯ ಐವರು ಶಾಸಕರೇ ರಾಜೀನಾಮೆ ಕೊಡುತ್ತಾರೆ ಎಂದು ಹೇಳಿದರು.

ಸರ್ಕಾರದ ಬಗ್ಗೆ ಗೊಂದಲದ ಮಾಹಿತಿ ಹೊರಬರುತ್ತಿರುವ ಸಂದರ್ಭದಲ್ಲೇ ಸಿಎಂ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಸರ್ಕಾರ ಬೀಳುತ್ತದೆ ಎಂಬ ಬಿಸಿ ಬಿಸಿ ಸುದ್ದಿ ಬಿತ್ತರವಾಗುತ್ತಿದೆ. ತೋಳ ಬಂತು, ತೋಳ ಎಂಬ ರೀತಿಯಲ್ಲಿ ಈ ಸುದ್ದಿಯನ್ನು ಹೊರಹಾಕಲಾಗುತ್ತಿದೆ. ಸ್ವಲ್ಪ ದಿನಗಳ ಕಾಲ ಕಾದು ನೋಡೋಣ. ಬಿಜೆಪಿಯವರೇ ಯುಟರ್ನ್ ತೆಗೆದುಕೊಳ್ಳುವ ಸಾಧ್ಯತೆ ಇದ್ದು, ಬಿಜೆಪಿ ಶಾಸಕರಿಂದ ರಾಜೀನಾಮೆ ಕೊಡಿಸೋಣ ಎಂದರು.

ಬೆಲೆ ಇಳಿಕೆಗೆ ಚಿಂತನೆ:
ತೈಲ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ನಿರಾಕರಿಸಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮಾದರಿಯಲ್ಲಿ ರಾಜ್ಯಸರ್ಕಾರ ಬೆಲೆ ಇಳಿಸುವ ಬಗ್ಗೆ ಚಿಂತನೆ ನಡೆಸಿದೆ. ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ತೈಲ ಬೆಲೆ ಇಳಿಕೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಅವರು ಹೇಳಿದರು.

ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಅತಿವೃಷ್ಟಿಪೀಡಿತ ಪ್ರದೇಶಗಳಿಗೆ ನೆರವು ನೀಡುವಂತೆ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿರುವ ಪ್ರಧಾನಿಯವರು ಇಂದು ಅಧ್ಯಯನಕ್ಕೆ ಕೇಂದ್ರದ ತಂಡವನ್ನು ರಾಜ್ಯಕ್ಕೆ ಕಳುಹಿಸಿದ್ದಾರೆ. 2 ಸಾವಿರ ಕೋಟಿ ರೂ. ನೆರವು ನೀಡುವಂತೆ ಮನವಿ ಮಾಡಲಾಗಿತ್ತು. ಅತಿವೃಷ್ಟಿ ಪೀಡಿತ ಕೊಡಗಿಗೆ ಎಷ್ಟು ನೆರವು ನೀಡಲಾಗುತ್ತದೆ ಎಂಬುದನ್ನು ಪ್ರಧಾನಿಯವರು ಹೇಳಿಲ್ಲ. ಆದರೆ ಅಧ್ಯಯನಕ್ಕೆ ಕೇಂದ್ರದ ತಂಡವನ್ನು ಕಳುಹಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

Facebook Comments

Sri Raghav

Admin