ಮೇಲ್ಮನೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್‍ಗೌಡಗೆ ಗೆಲುವು

ಈ ಸುದ್ದಿಯನ್ನು ಶೇರ್ ಮಾಡಿ

Suneel-Patil

ವಿಜಯಪುರ, ಸೆ.11- ವಿಧಾನಪರಿಷತ್‍ನ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ವಿಜಯಲಕ್ಷ್ಮಿ ಒಲಿದಿದ್ದಾಳೆ. ಮಾಜಿ ಸಚಿವ ಎಂ.ಬಿ.ಪಾಟೀಲ್ ಸಹೋದರ ಸುನೀಲ್‍ಗೌಡ ಪಾಟೀಲ್ 1975 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.  ಶಾಸಕ ಯತ್ನಾಳ್ ಬೆಂಬಲಿತ ಅಭ್ಯರ್ಥಿ ಗುಳಪ್ಪ ಶಟಗಾರ್ ವಿರುದ್ಧ ಭಾರೀ ಗೆಲುವು ಸಾಧಿಸಿದ್ದಾರೆ. ವಿಜಯಪುರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‍ಗೆ ನಡೆಯುವ ಈ ಉಪ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನೀಲ್‍ಗೌಡ ಪಾಟೀಲ್ ಹಾಗೂ ಬಿಜೆಪಿಯಿಂದ ಗುಳಪ್ಪ ಶಟಗಾರ್ ಸ್ಪರ್ಧಿಸಿದ್ದರು.

ಇಂದು ಬೆಳಗ್ಗೆ ನಡೆದ ಮತ ಎಣಿಕೆ ವೇಳೆ ಆರಂಭದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದರೂ ನಂತರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್‍ಗೌಡ ಪಾಟೀಲ್ 4702 ಮತಗಳನ್ನು ಪಡೆದು ವಿಜಯಿಯಾದರು.ಬಿಜೆಪಿ ಅಭ್ಯರ್ಥಿಗೆ 2727 ಮತಗಳು ಬಂದಿದ್ದರಿಂದ ಪರಾಭವ ಹೊಂದಿದರು.

ಈ ಹಿಂದೆ ಪಕ್ಷೇತರ ಅಭ್ಯರ್ಥಿಯಾಗಿ ಬಸವನಗೌಡ ಪಾಟೀಲ್ ಯತ್ನಾಳ್ ಈ ಸ್ಥಾನಕ್ಕೆ ಸ್ಪರ್ಧಿಸಿ ಆಯ್ಕೆಯಾಗಿದ್ದರು. ನಂತರ ಬದಲಾದ ಪರಿಸ್ಥಿತಿಯಿಂದಾಗಿ ಬಿಜೆಪಿ ಸೇರಿ ಶಾಸಕರಾದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇದೀಗ ಚುನಾವಣೆ ನಡೆದಿದ್ದು, ಬಿಜೆಪಿ ಸೋಲನುಭವಿಸಿದೆ.

Facebook Comments

Sri Raghav

Admin