ಬಾಬಬುಡನಗಿರಿ ದರ್ಗಾಗೆ ಹಿಂದೂ ಅರ್ಚಕರ ನೇಮಕ : ಪರಿಶೀಲನೆಗೆ ಹೈಕೋರ್ಟ್ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Baba-Budanagri--01
ಚಿಕ್ಕಮಗಳೂರು,ಸೆ.12- ಗುರು ದತ್ತಾತ್ರೇಯ ಬಾಬಬುಡನಗಿರಿ ದರ್ಗಾಕ್ಕೆ ಹಿಂದೂ ಅರ್ಚಕರನ್ನು ನೇಮಿಸುವ ಕುರಿತು ರಾಜ್ಯ ಸರ್ಕಾರ ಪರಿಶೀಲಿಸಬೇಕೆಂದು ಹೈಕೋರ್ಟ್ ಸೂಚನೆ ನೀಡಿದೆ. ಇದು ನಮ್ಮ ಹೋರಾಟಕ್ಕೆ ತಂದ ಜಯ ಎಂದು ಭಜರಂಗ ದಳದ ದಕ್ಷಿಣ ಕರ್ನಾಟಕ ಪ್ರಾಂತ ಸಂಯೋಜಕ ರಘು ಸಕಲೇಶಪುರ ತಿಳಿಸಿದ್ದಾರೆ.

ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಕರ್ನಾಟಕ ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳ ಮೂಲಕ ಅರ್ಚಕರ ನೇಮಕ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು. ಹೈಕೋರ್ಟ್ ಸೂಚನೆ ಮೇರೆಗೆ ಸರ್ಕಾರ ಪರಿಶೀಲನೆ ನಡೆಸಿ ಅರ್ಚಕರನ್ನು ನೇಮಕ ಮಾಡುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಸರ್ಕಾರವು ಕೋಮು ಸೌಹಾರ್ದತೆ ಧಕ್ಕಯಾಗದಂತೆ ನಿಗಾವಹಿಸಿ ಅರ್ಚಕ ನೇಮ ಮಾಡಲು ಒತ್ತಾಯಿಸಿದರು. ಜಿಲ್ಲಾ ಕಾರ್ಯದರ್ಶಿ ಯೋಗೀಶ್ ರಾಜ್ ಅರಸ್, ಭಜರಂಗದಳದ ಜಿಲ್ಲಾ ಸಂಯೋಜಕ ಮಂಜು, ಅಮಿತ್ ಇದ್ದರು.

Facebook Comments

Sri Raghav

Admin