‘ಬಿಜೆಪಿಯ 10 ಶಾಸಕರು ಜೆಡಿಎಸ್ ಸಂಪರ್ಕದಲ್ಲಿದ್ದಾರೆ’

ಈ ಸುದ್ದಿಯನ್ನು ಶೇರ್ ಮಾಡಿ

Sa-Ra-Mahesh--01

ಮೈಸೂರು, ಸೆ.12- ಬಿಜೆಪಿಯ ಹತ್ತು ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಜೆಡಿಎಸ್ ಶಾಸಕರ ಶಕ್ತಿ ಏನೆಂಬುದು ಮುಂದೆ ಗೊತ್ತಾಗಲಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಶಾಸಕರು ಒಗ್ಗಟ್ಟಾಗಿದ್ದು, ಯಾರೇ ಒಬ್ಬರನ್ನು ಸೆಳೆಯುವ ಯತ್ನ ಮಾಡಿದರೆ ಜೆಡಿಎಸ್ ಶಕ್ತಿ ಏನೆಂಬುದು ಗೊತ್ತಾಗಲಿದೆ ಎಂದರು. 20 ವರ್ಷಗಳ ಕಾಲ ಬಿಜೆಪಿಯಲ್ಲಿ ಇದ್ದೆ. ರಾಜಕಾರಣ ಹೇಗೆ ಮಾಡಬೇಕೆಂಬುದು ನಮಗೂ ಅರ್ಥವಾಗಿದೆ.

ಜೆಡಿಎಸ್-ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ 4 ತಿಂಗಳು ಕೂಡ ತುಂಬಿಲ್ಲ. ಆದರೂ ಮಾಧ್ಯಮಗಳಲ್ಲಿ ಇಲ್ಲ ಸಲ್ಲದ ವದಂತಿಗಳು ಹರಡುತ್ತಿವೆ. ಸಮ್ಮಿಶ್ರ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ಆದರೂ ರಾಜಕೀಯ ಪರಿಸ್ಥಿತಿಯ ಲಾಭ ಪಡೆಯಲು ಹವಣಿಸುತ್ತಿರುವುದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದು ತಿಳಿಸಿದರು.

ಬಿಜೆಪಿಯ ಕೆಲವು ಮುಖಂಡರು ಅಧಿಕಾರದ ಆಸೆ ಹೊಂದಿದ್ದು, ಕೆಲವು ಶಾಸಕರಿಗೆ ಇಲ್ಲ ಸಲ್ಲದ ಆಸೆ ತೋರಿಸಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಜೆಡಿಎಸ್ ಪ್ರಾದೇಶಿಕ ಪಕ್ಷವಾದರೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ರಾಜಕಾರಣ ಹೇಗೆ ಮಾಡಬೇಕೆಂಬುದನ್ನು ಚೆನ್ನಾಗಿ ಬಲ್ಲವರಾಗಿದ್ದಾರೆ. ಅವರು ಮುಖ್ಯಮಂತ್ರಿಯಾಗಿಯೂ ರೈತರ ಪರ ಕೆಲಸ ಮಾಡಿದ್ದಾರೆ. ಬಿಜೆಪಿಯ ಹಲವು ಶಾಸಕರ ಸಂಪರ್ಕದಲ್ಲಿದ್ದಾರೆ. ನಾವೇನು ಸುಮ್ಮನೆ ಕುಳಿತಿಲ್ಲ ಎಂದು ತಿರುಗೇಟು ನೀಡಿದರು.

ರೈತರ ಸಾಲ ಮನ್ನಾ ಮಾಡಿರುವುದಕ್ಕೆ ರಾಷ್ಟ್ರ ಮಟ್ಟದಲ್ಲಿ ಸರ್ಕಾರಕ್ಕೆ ಮುಚ್ಚುಗೆ ವ್ಯಕ್ತವಾಗಿದೆ. ಕೊಡಗು ಸೇರಿದಂತೆ ನೆರೆ ಸಂತ್ರಸ್ತರಿಗೆ ನೆರವು ಕೋರುವ ರಾಜ್ಯದ ನಿಯೋಗದಲ್ಲಿ ಬಿಜೆಪಿಯವರು ಪ್ರಧಾನಿ ಬಳಿಗೆ ಹೋಗದೆ ಇಲ್ಲಿ ಕೆಟ್ಟ ರಾಜಕಾರಣ ಮಾಡುತ್ತಿದ್ದಾರೆ. ನಮಗೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಕೆಲಸ ಮಾಡಲು ಬಿಡಿ, ಇಲ್ಲದಿದ್ದರೆ ನಾವು ಕೂಡ ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಸಿದರು.

Facebook Comments

Sri Raghav

Admin