ಬಿಜೆಪಿಯ ಯಾವ ಒಬ್ಬ ಶಾಸಕನನ್ನು ಮುಟ್ಟಲು ಸಾಧ್ಯವಿಲ್ಲ : ರೇಣುಕಾಚಾರ್ಯ

ಈ ಸುದ್ದಿಯನ್ನು ಶೇರ್ ಮಾಡಿ

Renukacharya

ಬೆಂಗಳೂರು,ಸೆ.12-ಬಿಜೆಪಿಯ ಯಾವ ಒಬ್ಬ ಶಾಸಕನನ್ನು ಮುಟ್ಟಲು ಸಾಧ್ಯವಿಲ್ಲ. ಕೆಲವರು ಪಕ್ಷ ಬಿಟ್ಟು ಹೋಗುತ್ತಾರೆಂಬುದು ಶುದ್ಧ ಸುಳ್ಳು ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.  ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ 104 ಮಂದಿ ಶಾಸಕರು ಒಗ್ಗಟ್ಟಾಗಿದ್ದೇವೆ. ಯಾರೊಬ್ಬರು ಅಸಮಾಧಾನಗೊಂಡಿಲ್ಲ. ಪಕ್ಷ ಬಿಟ್ಟು ಹೋಗುವ ಯೋಚನೆಯನ್ನೂ ಕೂಡ ಯಾವುದೇ ಶಾಸಕರು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಆಪರೇಷನ್ ಕಮಲದ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಪಕ್ಷದ ತತ್ವ ಸಿದ್ದಾಂತ ಒಪ್ಪಿಕೊಂಡು ಬರುವವರಿಗೆ ಯಾವಾಗಲೂ ಸ್ವಾಗತ ಇದ್ದೇ ಇರುತ್ತದೆ. ಶೀಘ್ರದಲ್ಲೇ ಬಿಜೆಪಿಗೆ ಒಳ್ಳೆಯ ದಿನಗಳು ಬರಲಿದೆ ಎಂದು ಸೂಚ್ಯವಾಗಿ ಹೇಳಿದರು.  ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ. ಅವರ ಈ ಆಟ ಬಹಳ ದಿನ ನಡೆಯುವುದಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಈಗಾಗಲೇ ಅತೃಪ್ತಿ, ಅಸಮಾಧಾನ ಉಂಟಾಗಿ ಶಾಸಕರೇ ಬಂಡಾಯ ಸಾರಿದ್ದಾರೆ. ಸರ್ಕಾರ ಪತನವಾದರೆ ಅದಕ್ಕೆ ಬಿಜೆಪಿ ಹೊಣೆಯಲ್ಲ ಎಂದರು.

ನಾವು ಯಾವುದೇ ಶಾಸಕರಿಗೆ ಆಮಿಷವೊಡ್ಡುತ್ತಿಲ್ಲ. ಅವರೇ ಹಾದಿಬೀದಿಯಲ್ಲಿ ಕಿತ್ತಾಡಿಕೊಂಡರೆ ನವು ಏನು ಮಾಡಲು ಸಾಧ್ಯ. ಪ್ರತಿಪಕ್ಷವಾದ ಬಿಜೆಪಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿದೆ ಎಂದು ಹೇಳಿದರು.  ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಿಸಿದರೂ ಸರ್ಕಾರ ರಚನೆ ಮಾಡಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡು ಹೇಗೋ ಕಾಲ ನೂಕುತ್ತಿವೆ. ಈ ಸರ್ಕಾರ ಮುಂದುವರೆಯುವುದೇ ಅಲ್ಲಿನ ಬಹುತೇಕ ಶಾಸಕರಿಗೆ ಇಷ್ಟವಿಲ್ಲ. ಇದರಿಂದ ಅನೇಕ ಶಾಸಕರು ಅಸಮಾಧಾನಗೊಂಡಿದ್ದಾರೆ ಎಂದರು.

ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಬಾರದೆಂಬ ಒಂದೇ ಕಾರಣಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಅನೈತಿಕ ರಾಜಕಾರಣಕ್ಕೆ ಮುನ್ನುಡಿ ಬರೆದಿದ್ದರು. ಈಗ ಅದರ ಫಲವನ್ನು ಉಣುತ್ತಿದ್ದಾರೆ. ಯಡಿಯೂರಪ್ಪನವರಿಗೆ ಜನ ಬೆಂಬಲ ಮತ್ತು ಮಠಾಧೀಶರ ಬೆಂಬಲ ಇರುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ರೇಣುಕಾಚಾರ್ಯ ಹೇಳಿದರು.

Facebook Comments

Sri Raghav

Admin