5 ಬಾರಿ ಮೇಘಾಲಯ ಸಿಎಂ ಆಗಿದ್ದ ಡಿ.ಡಿ.ಲಪಾಂಗ್ ಕಾಂಗ್ರೆಸ್‍ಗೆ ರಾಜೀನಾಮೆ

ಈ ಸುದ್ದಿಯನ್ನು ಶೇರ್ ಮಾಡಿ

Congress

ಶಿಲ್ಲಾಂಗ್, ಸೆ.14 (ಪಿಟಿಐ)- ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಮೇಘಾಲಯದ ಹಿರಿಯ ಕಾಂಗ್ರೆಸ್ ಧುರೀಣ ಡಿ.ಡಿ.ಲಪಾಂಗ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್‍ಗೆ ಮತ್ತು ಈಶಾನ್ಯ ಪಾಂತ್ಯದಲ್ಲಿ ಪಕ್ಷದ ಸಂಘಟನೆಗೆ ಭಾರೀ ಹೊಡೆತ ಬಿದ್ದಂತಾಗಿದೆ.  ನಿನ್ನೆ ರಾತ್ರಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು ಹಿರಿಯ ನಾಯಕರನ್ನು ಮೂಲೆಗುಂಪು ಮಾಡುತ್ತಿರುವ ಪಕ್ಷದ ನಾಯಕತ್ವದಿಂದ ಬೇಸತ್ತು ತಾವು ಕಾಂಗ್ರೆಸ್ ತೊರೆಯುತ್ತಿರುವುದಾಗಿ ಹೇಳಿದ್ದಾರೆ.

ತಾವು ಭಾರವಾದ ಹೃದಯದೊಂದಿಗೆ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿರುವ ಮೇಘಾಲಯ ಪ್ರದೇಶ ಕಾಂಗ್ರೆಸ್ ಸಮಿತಿ(ಎಂಪಿಸಿಸಿ) ಮಾಜಿ ಅಧ್ಯಕ್ಷರು, ಹಿರಿಯ ನಾಯಕರು ಮತ್ತು ಪಕ್ಷದ ವಯೋವೃದ್ದರನ್ನು ಎಐಸಿಸಿ ಕಡೆಗಣಿಸುತ್ತಿದೆ ಎಂದು ಆರೋಪಿಸಿದ್ದಾರೆ.  ಈಶಾನ್ಯ ರಾಜ್ಯಗಳಲ್ಲಿ ಅದರಲ್ಲೂ ವಿಶೇಷವಾಗಿ ಮೇಘಾಲಯದಲ್ಲಿ ಅತ್ಯಂತ ಪ್ರಭಾವಿ ನಾಯಕರಾದ ಲಪಾಂಗ್ ರಾಜೀನಾಮೆಯಿಂದ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ.

Facebook Comments

Sri Raghav

Admin