ಇಸ್ರೋ ಮಾಜಿ ವಿಜ್ಞಾನಿಗೆ 50 ಲಕ್ಷ ರೂ. ಪರಿಹಾರ ನೀಡುವಂತೆ ಸುಪ್ರೀಂ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

Istro

ನವದೆಹಲಿ, ಸೆ.14(ಪಿಟಿಐ)- ಇಪ್ಪತ್ತನಾಲ್ಕು ವರ್ಷಗಳ ಹಿಂದಿನ ಬೇಹುಗಾರಿಕೆ ಪ್ರಕರಣದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ0 ಮಾಜಿ ವಿಜ್ಞಾನಿ ನಂಬಿ ನಾರಾಯಣನ್ ಅವರ ಬಂಧನ ಅನಗತ್ಯವಾಗಿತ್ತು ಎಂದು ಹೇಳಿರುವ ಸುಪ್ರೀಂಕೋರ್ಟ್, ಇದರಲ್ಲಿ ಕೇರಳ ಪೊಲೀಸ್ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆಗೆ ಆದೇಶಿಸಿದೆ.

ಅಲ್ಲದೇ ಈ ಪ್ರಕರಣದಲ್ಲಿ ಮಾನಸಿಕ ಕಿರುಕುಳ ಅನುಭವಿಸಿರುವ 76 ವರ್ಷಗಳ ನಂಬಿ ನಾರಾಯಣನ್ ಅವರಿಗೆ 50 ಲಕ್ಷ ರೂ.ಗಳ ಪರಿಹಾರ ನೀಡುವಂತೆಯೂ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ.  ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವು, ನಾರಾಯಣನ್ ಅವರ ಬಂಧನ ಅನಗತ್ಯವಾಗಿತ್ತು. ಅವರನ್ನು ವಿನಾಕಾರಣ ಬಂಧಿಸಿ, ಹಿಂಸೆ ಮತ್ತು ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಪೀಠ ತಿಳಿಸಿದೆ.

Facebook Comments

Sri Raghav

Admin