ಬಿಜೆಪಿಯವರ ದುಡ್ಡಿನ ಆಟ ನಡೆಯಲ್ಲ : ವೇಣುಗೋಪಾಲ್

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01
ಬೆಂಗಳೂರು,ಸೆ.16-ದುಡ್ಡಿನ ಹೊಳೆ ಹರಿಸಿದರೂ ಬಿಜೆಪಿಯ ಆಟ ನಡೆಯುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಜಿ.ವೇಣುಗೋಪಾಲ್ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಐಟಿ, ಇಡಿಯಂತಹ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡರೂ ಬಿಜೆಪಿಯ ದುಡ್ಡಿನ ಆಟ ನಡೆಯುವುದಿಲ್ಲ ಎಂದು ಹೇಳಿದರು.

ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಬಿಜೆಪಿ ಪ್ರಯತ್ನ ಯಶಸ್ವಿಯಾಗುವುದಿಲ್ಲ. ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ. ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಅಧಿಕಾರ ಪೂರ್ಣಗೊಳಿಸಲಿದೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.

ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡಲಾಗುವುದು. ಈಗಾಗಲೇ ಹೇಳಿರುವಂತೆ ಈ ತಿಂಗಳ ಅಂತ್ಯದೊಳಗೆ ಸಂಪುಟ ವಿಸ್ತರಣೆ ನಡೆಯಲಿದ್ದು, ಮುಂದೂಡುವ ಪ್ರಶ್ನೆಯೇ ಇಲ್ಲ ಎಂದರು.  ಜಾರಕಿಹೊಳಿ ಸಹೋದರರ ವಿಚಾರ ಸಮಸ್ಯೆಯೇ ಅಲ್ಲ. ಅದರಿಂದ ಪಕ್ಷಕ್ಕೆ ಹಾಗೂ ಸಕ್ರ್ರಾರಕ್ಕೆ ಯಾವುದೇ ತೊಂದರೆಯೂ ಆಗುವುದಿಲ್ಲ ಎಂದು ವೇಣುಗೋಪಾಲ್ ಹೇಳಿದರು.

Facebook Comments

Sri Raghav

Admin