ನಾಳೆ ಸಿಎಂ ಕುಮಾರಸ್ವಾಮಿ ಕಲಬುರಗಿ ಪ್ರವಾಸ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-CM

ಬೆಂಗಳೂರು,ಸೆ.16-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಗುಲ್ಬರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಲಿದ್ದಾರೆ.ನಾಳೆ ಬೆಳಗ್ಗೆ ಕಲ್ಬುರ್ಗಿಗೆ ಭೇಟಿ ನೀಡುವ ಮುಖ್ಯಮಂತ್ರಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಪಾಲ್ಗೊಂಡು ಸರ್ದಾರ್ ವಲ್ಲಭಾಯ್ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.

ನಂತರ ಸಂತ ಸೇವಾ ಲಾಲ್ ಸಾಂಸ್ಕøತಿಕ ಭವನ ಹೊಸ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಾದ ನಂತರ ಜಿಲ್ಲೆಯ ಅಬ್ಜಲಪುರ ತಾಲ್ಲೂಕಿನ ದೇವಲಗಾಣಗಪುರ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ಬರಪೀಡಿತ ಪ್ರದೇಶಗಳ ವೀಕ್ಷಣೆ ಮಾಡುವ ಕಾರ್ಯಕ್ರಮವಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ನಂತರ ದತ್ತಾತ್ರೇಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Facebook Comments

Sri Raghav

Admin