ಕುಮಾರಸ್ವಾಮಿ ಅತ್ಯಂತ ದುರ್ಬಲ ಮುಖ್ಯಮಂತ್ರಿ : ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Eshwarappa--01
ಶಿವಮೊಗ್ಗ, ಸೆ.16-ಎಚ್.ಡಿ.ಕುಮಾರಸ್ವಾಮಿಯವರು ಅತ್ಯಂತ ದುರ್ಬಲ ಮುಖ್ಯಮಂತ್ರಿ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿನಿತ್ಯ ಅವರಿಗೆ ಕಾಂಗ್ರೆಸ್‍ನವರು ಕಾಟ ಕೊಡುತ್ತಿದ್ದಾರೆ. ಜೆಡಿಎಸ್-ಬಿಜೆಪಿ ಸರ್ಕಾರವಿದ್ದಾಗ ನಾವು ಯಾವುದೇ ತೊಂದರೆ ಕೊಡುತ್ತಿರಲಿಲ್ಲ. ಈಗ ನಿತ್ಯವೂ ಕಾಂಗ್ರೆಸ್‍ನವರಿಂದ ತೊಂದರೆಯಾಗುತ್ತಿದೆ. ಅವರು ದುರ್ಬಲ ಮುಖ್ಯಮಂತ್ರಿಯಾಗಿದ್ದಾರೆ ಎಂದು ಹೇಳಿದರು.

ಸರ್ಕಾರವನ್ನು ಬೀಳಿಸುವ ಕಾರ್ಯಕ್ಕೆ ಬಿಜೆಪಿ ಕೈ ಹಾಕಿಲ್ಲ. ಅವರ ಒಳಜಗಳದಿಂದ ಬಿದ್ದು ಹೋದರೆ ಅದಕ್ಕೆ ನಾವು ಜವಾಬ್ದಾರರಾಗುವುದಿಲ್ಲ. ಕಾಂಗ್ರೆಸ್-ಜೆಡಿಎಸ್‍ನವರು ದಿನಕ್ಕೊಂದು ನಾಟಕವಾಡುತ್ತಿದ್ದಾರೆ. ಮುಖ್ಯಮಂತ್ರಿಯವರನ್ನು ಕೆಳಗಿಳಿಸಲು ಕಾಂಗ್ರೆಸ್‍ನವರು ಹುನ್ನಾರ ಮಾಡಿದ್ದಾರೆ. ಈ ಮಾತನ್ನು ಸ್ವತಃ ಎಚ್.ಡಿ.ಕುಮಾರಸ್ವಾಮಿಯವರು ಹಾಗೂ ಜೆಡಿಎಸ್ ಮುಖಂಡರು ಹೇಳುತ್ತಿದ್ದಾರೆ ಎಂದರು. ಅಧಿಕಾರ ಉಳಿಸಿಕೊಳ್ಳಲು ಹರಸಾಹಸ ಪಡುವುದನ್ನು ಬಿಟ್ಟು ಅಭಿವೃದ್ದಿ ಕಡೆ ಗಮನಹರಿಸಿ ಎಂದು ಹೇಳಿದರು.

Facebook Comments

Sri Raghav

Admin