ಪೆಟ್ರೋಲ್- ಡೀಸೆಲ್ ಬೆಲೆಯಲ್ಲಿ 2 ರಿಂದ 3 ರೂ. ಇಳಿಸಲು ರಾಜ್ಯ ಸರ್ಕಾರ ಚಿಂತನೆ..?

ಈ ಸುದ್ದಿಯನ್ನು ಶೇರ್ ಮಾಡಿ

Petrol-and-diesel
ಬೆಂಗಳೂರು,ಸೆ.16- ನಿರಂತರವಾಗಿ ಏರುತ್ತಿರುವ ತೈಲ ಬೆಲೆಯಿಂದ ಜನರು ಬೇಸತ್ತಿರುವುದನ್ನು ಮನಗಂಡಿರುವ ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಕಡಿಮೆ ಮಾಡಲು ಚಿಂತನೆ ನಡೆಸಿದ್ದು, ಪ್ರತಿ ಲೀಟರ್‍ಗೆ 2ರಿಂದ 3 ರೂ. ಇಳಿಸುವ ಸಾಧ್ಯತೆಗಳಿವೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಲು ನಿರಾಕರಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸದ್ಯದಲ್ಲೇ ರಾಜ್ಯ ಸರ್ಕಾರ ಡೀಸಲ್ ಮತ್ತು ಪೆಟ್ರೋಲ್ ಮೇಲಿನ ಸೆಸ್ ಇಳಿಕೆ ಮಾಡುವ ಸಾಧ್ಯತೆಗಳಿದ್ದು, ಪ್ರತಿ ಲೀಟರ್‍ಗೆ 2ರಿಂದ 3 ರೂ. ಇಳಿಕೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ತೈಲ ಬೆಲೆ ಇಳಿಕೆಗೆ ಸಂಬಂಧಿಸಿದಂತೆ ಸದ್ಯದಲ್ಲಿಯೇ ಅಧಿಕೃತ ಆದೇಶವೂ ಹೊರಬೀಳಲಿದೆ ಎನ್ನಲಾಗಿದೆ.  ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೋಲ್, ಡಿಸೇಲ್ ಬೆಲೆಯಿಂದ ಜನತೆ ಕಂಗೆಟ್ಟಿರುವ ಈ ನಡುವೆ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ.  ರಾಜ್ಯದಲ್ಲಿ ನಾಳೆಯಿಂದ ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ಸೆಸ್‍ನ್ನು ಕಡಿಮೆ ಮಾಡುವುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಸೆಸ್ ಕಡಿಮೆ ಮಾಡುವುರಿಂದ ಎಷ್ಟು ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಎಲ್ಲಾ ಆಯಾಮಗಳನ್ನು ನೋಡಿದ ಬಳಿಕೆ ಸಿಂಎ ಪೆಟ್ರೋಲ್. ಡಿಸೇಲ್ 2 ರೂ ಅಥಾವ 3 ರೂ.ಗಳಷ್ಟು ಕಡಿಮೆಯಾಗಲಿದೆ ಎಂದು ಹೇಳಲಾಗುತ್ತಿದೆ.  ನಾಳೆ ಈ ಬಗ್ಗೆ ಆರ್ಥಿಕ ಇಲಾಖೆಯಿಂದ ಆದೇಶ ಹೊರ ಬೀಳುವ ಸಾಧ್ಯತೆಯಿದೆ.  ನೆರೆಯ ಆಂಧ್ರಪ್ರದೇಶದಲ್ಲಿ ಕೂಡ ತೈಲ ಬೆಲೆ ಕಡಿಮೆ ಮಾಡಲಾಗಿದೆ ಎಂಬ ಮಾಹಿತಿ ಆಧರಿಸಿ ರಾಜ್ಯ ಸಮ್ಮಿಶ್ರ ಸರ್ಕಾರ ಸೆಸ್ ಕಡಿಮೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

Facebook Comments

Sri Raghav

Admin