2014ರ ಚುನಾವಣೆಯಲ್ಲಿ ಮೋದಿ ಗೆಲುವಿನ ಹಿಂದಿದ್ದ ಮಾಸ್ಟರ್ ಮೈಂಡ್ ಜೆಡಿಯುಗೆ ಜಂಪ್..!

ಈ ಸುದ್ದಿಯನ್ನು ಶೇರ್ ಮಾಡಿ

Master-Mind
ಪಾಟ್ನಾ, ಸೆ.16- ಬಿಜೆಪಿ, ಜೆಡಿಯು ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಚುನಾವಣಾ ಚಾಣಾಕ್ಷನಾಗಿ ಕೆಲಸ ನಿರ್ವಹಿಸಿದ್ದ ಪ್ರಶಾಂತ್ ಕಿಶೋರ್ ಅವರು ಇಂದು ಜನತಾದಳ (ಯು) ಪಕ್ಷಕ್ಕೆ ಸೇರ್ಪಡೆಯಾಗಿದ್ದು, ರಾಜಕೀಯದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಇಂದು ಪಾಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ವರಿಷ್ಠ ನಿತೀಶ್ ಕುಮಾರ್ ಅವರು ಪ್ರಶಾಂತ್‍ಕಿಶೋರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಕಳೆದ ವಾರ ಹೈದರಾಬಾದ್‍ನ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‍ನಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪ್ರಶಾಂತ್ ಕಿಶೋರ್ ತಾವು ರಾಜಕೀಯದಲ್ಲಿ ಹೊಸ ಹೆಜ್ಜೆ ಇಡುತ್ತಿರುವ ಕುರಿತು ಸುಳಿವು ನೀಡಿದ್ದರು. ಆದರೆ ತಾವು ಯಾವ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿರಲಿಲ್ಲ. ಇದೀಗ ಅವರು ಜೆಡಿಎಯು ಸೇರುವ ಮೂಲಕ ಬಿಹಾರದಿಂದ ಚುನಾವಣೆಗೆ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ.

2012ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಯಾಗಿದ್ದಾಗ ಪ್ರಶಾಂತ್ ಕಿಶೋರ್ ಅವರ ಬಳಿ ತಮ್ಮ ಕೆಲಸವನ್ನು ಆರಂಭಿಸಿದ್ದರು. ಆ ನಂತರ ಅವರು 2014ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಚುನಾವಣಾ ಕಾರ್ಯತಂತ್ರವನ್ನು ಹೆಣೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರೊಂದಿಗಿನ ಭಿನ್ನಾಭಿ ಪ್ರಾಯದಿಂದಾಗಿ ಪ್ರಶಾಂತ್ ಬಿಜೆಪಿ ತೊರೆದಿದ್ದರು.

ನಂತರ ಕೆಲವು ವರ್ಷಗಳ ಕಾಲ ನಿತೀಶ್‍ಕುಮಾರ್ ಮತ್ತು ಕಾಂಗ್ರೆಸ್ ಪಕ್ಷದೊಂದಿಗೆ ಕೆಲಸ ಮಾಡಿದ್ದರು. ಪ್ರಶಾಂತ ಕಿಶೋರ್ ಅವರ ಸೇರ್ಪಡೆಯಿಂದ ಜೆಡಿಯುಗೆ ಹೊಸ ಶಕ್ತಿ ಬಂದಂತಾಗಿದೆ.

Facebook Comments

Sri Raghav

Admin