ಕಾಂಗ್ರೆಸ್‍ ಅಹಂ ತೃಪ್ತಿಗಾಗಿ ರಫೇಲ್ ಒಪ್ಪಂದ ತನಿಖೆ ಸಾಧ್ಯವಿಲ್ಲ : ರವಿಶಂಕರ್ ಪ್ರಸಾದ್

ಈ ಸುದ್ದಿಯನ್ನು ಶೇರ್ ಮಾಡಿ

Ravishakar-PRasad-Rafel

ನವದೆಹಲಿ, ಸೆ.19 (ಪಿಟಿಐ)-ಕಾಂಗ್ರೆಸ್‍ನ ನಾಯಕರ ಅಹಂಭಾವನೆ ತೃಪ್ತಿಪಡಿಸಲು ರಫೇಲ್ ಸಮರ ವಿಮಾನ ಖರೀದಿ ಒಪ್ಪಂದದ ಬಗ್ಗೆ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವ್ಯವಹಾರದಲ್ಲಿ ಯಾವುದೇ ಅಕ್ರಮ-ಅವ್ಯವಹಾರಗಳು ನಡೆದಿಲ್ಲ. ಕಾಂಗ್ರೆಸ್ ನಾಯಕರೊಬ್ಬರನ್ನು ಸಮಾಧಾನ ಮಾಡುವುದಕ್ಕೋಸ್ಕರ ಈ ಒಪ್ಪಂದದ ಬಗ್ಗೆ ತನಿಖೆ ನಡೆಸಲಾಗದು ಎಂದು ಸ್ಪಷ್ಟಪಡಿಸಿದರು.

ಮುಸ್ಲಿಮ್ ಸಮುದಾಯದಲ್ಲಿ ಜಾರಿಯಲ್ಲಿರುವ ವಿವಾದಿತ ತ್ರಿವಳಿ ತಲಾಖ್ ದಂಡನಾತ್ಮಕ ಅಪರಾಧ ಎಂದು ಪರಿಗಣಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದ ಅವರು, ಲಿಂಗ ತಾರತಮ್ಯ ನಿವಾರಣೆ ಹಾಗೂ ಮಹಿಳೆಯರಿಗೆ ನ್ಯಾಯ ಒದಗಿಸಲು ತ್ರಿವಳಿ ತಲಾಖ್ ರದ್ದತಿ ಮಸೂದೆ ಅನುಮೋದನೆಗೆ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

22 ದೇಶಗಳು ತ್ರಿವಳಿ ತಲಾಕ್ ರದ್ದತಿಯನ್ನು ಕ್ರಮಬದ್ದಗೊಳಿಸಿವೆ. ಆದರೆ ಭಾರತದಲ್ಲಿ ಮತಬ್ಯಾಂಕ್ ರಾಜಕಾರಣದಿಂದ ಕಾಂಗ್ರೆಸ್ ಸಹಕಾರ ನೀಡಲಿಲ್ಲ ಎಂದು ಸಚಿವರು ಆರೋಪಿಸಿದರು.

Facebook Comments

Sri Raghav

Admin