ಗೋವಾದಲ್ಲಿ ಸರ್ಕಾರ ರಚಿಸಲು ಸಾಕಷ್ಟು ಸಂಖ್ಯಾಬಲ ಇದೆ : ಕಾಂಗ್ರೆಸ್

ಈ ಸುದ್ದಿಯನ್ನು ಶೇರ್ ಮಾಡಿ

Goa-Gvt

ಪಣಜಿ, ಸೆ.19 (ಪಿಟಿಐ)- ಗೋವಾದಲ್ಲಿ ಸರ್ಕಾರ ರಚಿಸಲು ಅಗತ್ಯ ಸಂಖ್ಯಾಬಲ ಹೊಂದಿರುವುದಾಗಿ ವಿರೋಧಪಕ್ಷ ಕಾಂಗ್ರೆಸ್ ಪ್ರತಿಪಾದಿಸಿದ್ದು, ಕರಾವಳಿ ರಾಜ್ಯದ ರಾಜಕೀಯ ಬೆಳವಣಿಗೆ ಕುತೂಹಲ ಕೆರಳಿಸಿದೆ. 40 ಸದಸ್ಯರ ಗೋವಾ ವಿಧಾನಸಭೆಯಲ್ಲಿ ತನಗೆ 21 ಶಾಸಕರ ಬೆಂಬಲವಿದೆ. ಇದು ರಾಜ್ಯದಲ್ಲಿ ಸರ್ಕಾರ ರಚಿಸಲು ಸಾಕಷ್ಟು ಸಂಖ್ಯಾಬಲವಾಗುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಗೋವಾ ವಿಧಾನಸಭೆಯಲ್ಲಿ 16 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಏಕೈಕ ಅತಿದೊಡ್ಡ ಪಕ್ಷವಾಗಿದ್ದು, ಈಗಾಗಲೇ ಸರ್ಕಾರ ರಚಿಸುವ ಹಕ್ಕು ಮಂಡಿಸಿದೆ. ಮೆದೋಜ್ಜಿರಕ ಗ್ರಂಥಿ ದೋಷದಿಂದಾಗಿ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ(ಏಮ್ಸ್) ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್(62) ದಾಖಲಾಗಿ ವೈದ್ಯಕೀಯ ಚಿಕಿತ್ಸೆ ಮುಂದುವರಿದಿರುವ ಸಂದರ್ಭದಲ್ಲೇ ರಾಜಕೀಯ ಬೆಳವಣಿಗೆ ಕಂಡುಬಂದಿದೆ.

ಪಿಟಿಐ ವಾರ್ತಾ ಸಂಸ್ಥೆಯೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಚಂದ್ರಕಾಂತ್ ಕವೇಲ್ಕರ್, ಗೋವಾದಲ್ಲಿ ಸರ್ಕಾರ ರಚಿಸಲು ನಾವು ಸಾಕಷ್ಟು ಸಂಖ್ಯಾಬಲ ಹೊಂದಿದ್ದೇವೆ. ನಮ್ಮಲ್ಲಿ ಅಗತ್ಯ ಸಂಖ್ಯೆ ಇದೆ. ನಮ್ಮೊಂದಿಗೆ ಯಾರೆಲ್ಲಾ ಸಂಪರ್ಕದಲ್ಲಿದ್ದಾರೆ ಎಂಬುದನ್ನು ಈಗ ತಿಳಿಸಲು ಸಾಧ್ಯವಿಲ್ಲ. ಆದರೆ ನಮಗೆ 21 ಶಾಸಕರ ಬೆಂಬಲ ಇದೆ ಎಂಬುದನ್ನು ನಾನು ಖಚಿತಪಡಿಸುತ್ತೇನೆ. ಈ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದರು.

ಕವೇಲ್ಕರ್ ನೇತೃತ್ವದ ಕಾಂಗ್ರೆಸ್ ಶಾಸಕರು ನಿನ್ನೆ ಗೋವಾ ರಾಜ್ಯಪಾಲರಾದ ಮೃದಲಾ ಸಿನ್ಹಾ ಅವರನ್ನು ಭೇಟಿ ಮಾಡಿದ ಬಿಜೆಪಿ ನೇತೃತ್ವದ ಬಿಜೆಪಿ ಸರ್ಕಾರವನ್ನು ವಿಧಾನಸಭೆಯಲ್ಲಿ ವಿಶ್ವಾಸ ಮತಕ್ಕೆ ಒಳಪಡಿಸುವಂತೆ ಆಗ್ರಹಿಸಿದ್ದಾರೆ.

Facebook Comments

Sri Raghav

Admin