ಎಂ.ಸಿ.ವೇಣುಗೋಪಾಲ್ ವಿಧಾನ ಪರಿಷತ್ ಆಯ್ಕೆಗೆ ಭಾರೀ ಲಾಬಿ

ಈ ಸುದ್ದಿಯನ್ನು ಶೇರ್ ಮಾಡಿ

M-C-VeNuGopal-G-Parameshwar

ಬೆಂಗಳೂರು, ಸೆ.19- ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಪರಮಾಪ್ತರಾದ ಎಂ.ಸಿ.ವೇಣುಗೋಪಾಲ್ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲು ಭಾರೀ ಲಾಬಿ ಆರಂಭವಾಗಿದೆ. ಸಂಸದರಾದ ಎಸ್.ಪಿ. ಮುದ್ದಹನುಮೇಗೌಡ, ಚಂದ್ರಪ್ಪ, ಬಿ.ವಿ.ನಾಯಕ್, ರಾಜ್ಯಸಭಾ ಸದಸ್ಯ ಚಂದ್ರಶೇಖರ್ ಸೇರಿದಂತೆ ಹಲವಾರು ಮಂದಿ ಲಾಬಿ ನಡೆಸುತ್ತಿದ್ದು, ಈ ಸಂಬಂಧ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಿಗೆ ಪತ್ರವನ್ನು ಬರೆಯಲಾಗಿದೆ.
ಈ ಹಿಂದೆ ಕೆಪಿಸಿಸಿಯ ಹಿಂದುಳಿದ ವರ್ಗ ಘಟಕದ ಅಧ್ಯಕ್ಷರಾಗಿದ್ದ ಎಂ.ಸಿ. ವೇಣುಗೋಪಾಲ್ ಅವರು ನಿಗಮ ಮಂಡಳಿ ಸೇರಿದಂತೆ ಹಲವಾರು ಹುದ್ದೆಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಂ.ಸಿ.ವೇಣುಗೋಪಾಲ್ ಅವರಿಗೆ ವಿಧಾನಪರಿಷತ್‍ಗೆ ಆಯ್ಕೆ ಮಾಡಲು ತೀವ್ರ ಲಾಬಿ ನಡೆದಿದೆ.

Facebook Comments

Sri Raghav

Admin