ನಾನೇಕೆ ಮುಂಬೈಗೆ ಹೋಗಲಿ..? : ಸಚಿವ ಆರ್. ಶಂಕರ್

ಈ ಸುದ್ದಿಯನ್ನು ಶೇರ್ ಮಾಡಿ

forest-minister-Shankar
ಉಡುಪಿ, ಸೆ.20- ನಾನು ಸರ್ಕಾರದ ಅಂಗವಾಗಿದ್ದೇನೆ, ನಾನೇಕೆ ಮುಂಬೈಗೆ ಹೋಗಲಿ ಎಂದು ಅರಣ್ಯ ಸಚಿವ ಆರ್. ಶಂಕರ್ ಪ್ರಶ್ನಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೆಪಿಜೆಪಿಯ ಪಕ್ಷೇತರ ಶಾಸಕನಾಗಿದ್ದೇನೆ. ಕಾಂಗ್ರೆಸ್ ಅಥವಾ ಜೆಡಿಎಸ್‍ಗೆ ಸೇರುವುದಿಲ್ಲ. ಪಕ್ಷೇತರನಾಗಿಯೇ ಉಳಿಯುತ್ತೇನೆ ಎಂದು ಸ್ಪಷ್ಟಪಡಿಸಿದರು.
ಯಾವುದೇ ಭಿನ್ನಮತ ಚಟುವಟಿಕೆಗಳಲ್ಲಿ ನಾನು ಭಾಗಿಯಾಗಿಲ್ಲ. ಆಪ್ತರ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಉಡುಪಿಗೆ ಬಂದಿದ್ದೇನೆ. ಇದುವರೆಗೆ ಬಿಜೆಪಿಯಿಂದ ನನಗೆ ಯಾವುದೇ ಆಹ್ವಾನ ಬಂದಿಲ್ಲ. ಈ ವಿಷಯದಲ್ಲಿ ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿವೆ ಎಂದು ಆರೋಪಿಸಿದರು.

ರಾಜ್ಯ ಸಮ್ಮಿಶ್ರ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ. ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಉತ್ತಮವಾಗಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಜನರು ಕೂಡ ಸರ್ಕಾರದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Facebook Comments

Sri Raghav

Admin