ಪರಿಷತ್‍ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹೊಣೆ ಗುಲಾಮ್ ನಬಿ ಆಜಾದ್ ಹೆಗಲಿಗೆ

ಈ ಸುದ್ದಿಯನ್ನು ಶೇರ್ ಮಾಡಿ

Gulab--01

ಬೆಂಗಳೂರು, ಸೆ.20- ವಿಧಾನ ಸಭೆಯಿಂದ ವಿಧಾನ ಪರಿಷತ್‍ನ ಮೂರು ಸದಸ್ಯ ಸ್ಥಾನಗಳಿಗೆ ನಡೆಯುವ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸುವ ಹೊಣೆಯನ್ನು ಎಐಸಿಸಿ ವರಿಷ್ಠರಾದ ಗುಲಾಮ್ ನಬಿ ಆಜಾದ್ ಅವರಿಗೇ ವಹಿಸಲಾಗಿದೆ. ಎಂ.ಸಿ.ವೇಣುಗೋಪಾಲ್, ನಿವೇದಿತ ಆಳ್ವ, ಯು.ಬಿ.ವೆಂಕಟೇಶ್, ಮಾಜಿ ಮೇಯರ್ ರಾಮಚಂದ್ರಪ್ಪ, ಮಲ್ಲಾಜಮ್ಮ, ವಾಸಂತಿ ಶಿವಣ್ಣ, ಚನ್ನಾರೆಡ್ಡಿ, ಗುರಪ್ಪನಾಯ್ಡು ಸೇರಿದಂತೆ 12 ಮಂದಿ ಆಕಾಂಕ್ಷಿಗಳಾಗಿದ್ದು, ಇವರ ಹೆಸರುಗಳನ್ನು ರಾಜ್ಯ ನಾಯಕರು ವರಿಷ್ಠರಿಗೆ ತಲುಪಿಸಿದ್ದಾರೆ.

ನಿನ್ನೆ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪಕ್ಷದ ಉಸ್ತುವಾರಿ ವೇಣುಗೋಪಾಲ್ ಮುಂತಾದವರು ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ.

ಚುನಾವಣಾ ಕಣಕ್ಕಿಳಿಯುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಜವಾಬ್ದಾರಿಯನ್ನು ಗುಲಾಮ್ ನಬಿ ಆಜಾದ್ ಅವರಿಗೆ ನೀಡಲಾಗಿದೆ.
ನವದೆಹಲಿಯಲ್ಲಿ ಬೀಡು ಬಿಟ್ಟಿರುವ ಆಕಾಂಕ್ಷಿಗಳು ಮೇಲ್ಮನೆ ಸದಸ್ಯತ್ವ ಪಡೆಯಲು ತಮ್ಮ ನಾಯಕರುಗಳೊಂದಿಗೆ ಲಾಬಿ ನಡೆಸುತ್ತಿದ್ದಾರೆ.
ಇದೇ 23ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, ಹೈಕಮಾಂಡ್ ಯಾರನ್ನು ಕಣಕ್ಕಿಳಿಸಲಿದೆ ಎಂಬುದನ್ನು ಕಾದು ನೋಡಬೇಕು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿರುವುದರಿಂದ ಮೂರು ಸ್ಥಾನಗಳಲ್ಲಿ ಎರಡು ಕಾಂಗ್ರೆಸ್‍ಗೆ ಹಾಗೂ ಒಂದು ಜೆಡಿಎಸ್‍ಗೆ ಬಿಟ್ಟುಕೊಡುವ ಬಗ್ಗೆ ಒಪ್ಪಂದವಾಗಿದೆ.
ಅದರಂತೆ ಕಾಂಗ್ರೆಸ್ ಯಾರನ್ನು ಕಣಕ್ಕಿಳಿಸಲಿದೆ ಎಂಬುದು ಇಂದು ಸಂಜೆ ಅಥವಾ ನಾಳೆ ಅಂತಿಮಗೊಳ್ಳಲಿದೆ.

Facebook Comments

Sri Raghav

Admin