ರಕ್ಷಣಾ ಸಚಿವೆ ನಿರ್ಮಲಾ ರಾಜೀನಾಮೆಗೆ ರಾಹುಲ್ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

Rahul-Gandhi--01
ನವದೆಹಲಿ, ಸೆ.20(ಪಿಟಿಐ)- ರಫೇಲ್ ಯುದ್ಧ ವಿಮಾನಗಳನ್ನು ನಿರ್ಮಿಸುವ ಸಾಮಥ್ರ್ಯ ಎಚ್‍ಎಎಲ್‍ಗೆ ಇಲ್ಲ ಎಂದು ಸುಳ್ಳು ಹೇಳಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜೀನಾಮೆ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.  ಟ್ವಿಟರ್‍ನಲ್ಲಿ ರಕ್ಷಣಾ ಸಚಿವರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ರಾಹುಲ್. ಸೀತಾರಾಮನ್ ಅವರನ್ನು ಆರ್‍ಎಂ(ರಫೇಲ್ ಮಿನಿಸ್ಟರ್) ಎಂದು ಟೀಕಿಸಿದ್ದಾರೆ.

ಭ್ರಷ್ಟಾಚಾರಗಳನ್ನು ಸಮರ್ಥಿಸಿಕೊಳ್ಳುತ್ತಿರುವ ಆರ್‍ಎಂ ಅವರು ಮತ್ತೆ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾರೆ. ರಫೇಲ್ ಫೈಟರ್ ಜೆಟ್‍ಗಳನ್ನು ತಯಾರಿಸುವ ಸಾಮಥ್ರ್ಯ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ಗೆ ಇಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸುಳ್ಳು ಹೇಳಿಕೆಯನ್ನು ಎಚ್‍ಎಎಲ್ ಮಾಜಿ ಮುಖ್ಯಸ್ಥ ಟಿ.ಎಸ್.ರಾಜು ತಳ್ಳಿ ಹಾಕಿದ್ದಾರೆ ಎಂದು ಮಾಧ್ಯಮ ವರದಿಯನ್ನು ಟ್ವಟಿರ್‍ನಲ್ಲಿ ಲಗತ್ತಿಸಿ ರಾಹುಲ್ ಆರೋಪಿಸಿದ್ದಾರೆ.

ಭ್ರಷ್ಟಾಚಾರವನ್ನು ಸಮರ್ಥಿಸಿಕೊಂಡು ಪದೇ ಪದೇ ಸುಳ್ಳು ಹೇಳುತ್ತಿರುವ ನಿರ್ಮಲಾ ಅವರು ರಕ್ಷಣಾ ಸಚಿವರಾಗಿ ಮುಂದುವರಿಯುವ ನೈತಿಕತೆ ಇಲ್ಲ. ಆದ್ದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಅಧ್ಯಕ್ಷರು ಆಗ್ರಹಿಸಿದ್ದಾರೆ.

Facebook Comments

Sri Raghav

Admin