ರೌಡಿಗಳನ್ನ ಮಟ್ಟ ಹಾಕುವುದೇ ನನ್ನ ಮೊದಲ ಆದ್ಯತೆ : ಅಲೋಕ್‍ ಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

Alok-Kumar

ಬೆಂಗಳೂರು, ಸೆ.21-ರೌಡಿಗಳು ಹಾಗೂ ವೃತ್ತಿಪರ ಆರೋಪಿಗಳ ಬಗ್ಗೆ ನಿಗಾ ಇಡಲಾಗುವುದು ಎಂದು ಅಪರಾಧ ವಿಭಾಗದ ನೂತನ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಅಲೋಕ್‍ಕುಮಾರ್ ತಿಳಿಸಿದರು. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸಿಸಿಬಿಯಲ್ಲಿ ಆರು ತಿಂಗಳಿನಿಂದ ಇತ್ಯರ್ಥವಾಗದೆ ಬಾಕಿ ಉಳಿದಿರುವ ಪ್ರಕರಣಗಳನ್ನು ಕೈಗೆತ್ತಿಕೊಂಡು ಈ ಪ್ರಕರಣಗಳ ತನಿಖೆ ವಿಳಂಬಕ್ಕೆ ಕಾರಣವೇನೆಂಬುದರ ಬಗ್ಗೆ ಅಧಿಕಾರಿಗಳಿಂದ ಸಮಜಾಯಿಷಿ ಕೇಳುತ್ತೇನೆ ಎಂದರು. ಸಿಸಿಬಿ ವ್ಯವಸ್ಥಿತವಾಗಿ ಹಾಗೂ ವೇಗದಿಂದ ತನಿಖೆ ನಡೆಸಿ ಬಾಕಿ ಉಳಿದಿರುವ ಪ್ರಕರಣಗಳನ್ನು ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥ ಪಡಿಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.

ಇತ್ತೀಚಿನ ಬೆಳವಣಿಗೆಗಳ ಪ್ರಕಾರ ಸರ್ಕಾರ ಅಸ್ಥಿರಗೊಳಿಸುವ ಪಾತ್ರದಲ್ಲಿ ರೌಡಿಗಳ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿದೆಯಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರೌಡಿಗಳು ಹಾಗೂ ವೃತ್ತಿಪರ ಆರೋಪಿಗಳ ಮೇಲೆ ನಿಗಾ ಇಡಲಾಗಿದೆ ಎಂದರು.

ಅಧಿಕಾರ ವಹಿಸಿಕೊಂಡ ನಂತರ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್‍ಕುಮಾರ್ ಅವರನ್ನು ಭೇಟಿ ಮಾಡಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.

Facebook Comments

Sri Raghav

Admin