‘ದಂಗೆ’ ಹೇಳಿಕೆ ನೀಡಿದ ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಿಜೆಪಿ

ಈ ಸುದ್ದಿಯನ್ನು ಶೇರ್ ಮಾಡಿ

BJP--01

ಬೆಂಗಳೂರು. ಸೆ.21 : ಸಮ್ಮಿಶ್ರ ಸರ್ಕಾರಕ್ಕೆ ಕಾಟ ಕೊಟ್ಟರೇ ಬಿಜೆಪಿ ವಿರುದ್ದ ದಂಗೆ ಹೇಳುವಂತೆ ಜನತೆಗೆ ದಂಗೆ ಏಳುವಂತೆ ಕರೆ ನೀಡಲಾಗುತ್ತೆ ಎಂದು ಹೇಳಿಕೆ ನೀಡಿದ್ದ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಬಿಜೆಪಿ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ದೂರು ನೀಡಿದೆ. ಗುರುವಾರ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಖಂಡಿಸಿ ಇಂದು ಬಿಜೆಪಿ ಕಾರ್ಯಕರ್ತರು ಮುಖಂಡರು ಭಾರೀ ಪ್ರತಿಭಟನೆ ನಡೆಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ನಡುವೆ ಸಿಎಂ ಹೇಳಿಕೆ ವಿರುದ್ದ ಡಿಜಿಐಜಿಪಿ ನೀಲಮಣಿ ರಾಜು ಅವರಿಗೆ ದೂರು ನೀಡಿದ್ದ ಬಿಜೆಪಿ ,ರಾಜ್ಯಪಾಲ ವಜಭಾಯಿ ವಾಲಾ ಅವರಿಗೂ ದೂರು ಕೊಟ್ಟಿದೆ.

ಕೇಂದ್ರ ಸಚಿವ ಡಿವಿ ಸದಾನಂದಗೌಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಆರ್.ಅಶೋಕ್, ಸಂಸದ ಪಿ.ಸಿ ಮೋಹನ್, ಅರವಿಂದ್ ಲಿಂಬಾವಳಿ, ಸಂಸದೆ ಶೋಭಾ ಕರಂದ್ಲಾಜೆ ಸೇರಿ ಹಲವು ನಾಯಕರು ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ದೂರು ನೀಡಿದರು.
ಸಮ್ಮಿಶ್ರ ಸರ್ಕಾರವನ್ನ ವಜಾಗೊಳಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿ. ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಕಾನೂನು ಕ್ರಮ ಕೈಗೊಳ್ಳಿ ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ರಾಜ್ಯದ ಕಾನೂನು ಕಾಪಾಡಬೇಕಾದ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿಗಳೇ ಜನರನ್ನು ದಂಗೆ ಏಳಲು ಕರೆನೀಡುವುದು ರಾಜದ್ರೋಹ ಎನಿಸಿಕೊಳ್ಳುತ್ತದೆ. ಹಾಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿಯು ರಾಜ್ಯಪಾಲರನ್ನು ಆಗ್ರಹಿಸಿದೆ. ಸಿಎಂ ನೀಡಿದ್ದ ದಂಗೆ ಹೇಳಿಕೆ ‌ಹಾಗೂ ಯಡಿಯೂರಪ್ಪ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆಗಳ ಕುರಿತು ಮಾಹಿತಿ ನೀಡಿ ಸಿಎಂ ವಿರುದ್ಧ ಸಂವಿಧಾನಾತ್ಮಕವಾಗಿ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿತು.

ದೂರು ನೀಡಿದ ಬಳಿಕ ಮಾತನಾಡಿದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಿಎಂ ಅವರ ಇತ್ತೀಚಿನ ನಡವಳಿಕೆಗಳು ಅಸಮಾಧಾನದ ಕಿಡಿ ಹಚ್ಚಿದೆ. ಒಬ್ಬ ಸಿಎಂ ಪ್ರತಿಭಟನೆ ಸೇರಿದಂತೆ ಬೇರೆ ಬೇರೆ ವಿಚಾರಗಳನ್ನ ಹತೋಟಿಗೆ ತರಬೇಕು.‌ ಆದರೆ ತಾವೇ ದಂಗೆ ಏಳಬೇಕು ಎಂದು ಕರೆ ನೀಡುವುದು ದೇಶದ ಇತಿಹಾಸದಲ್ಲಿ ಮೊದಲ ಘಟನೆಯಾಗಿದೆ. ರಾಗ, ದ್ವೇಷ ಇಲ್ಲದೇ ಆಡಳಿತ ಮಾಡುತ್ತೇನೆ ಎಂದು ಪ್ರಮಾಣ ವಚನ ಮಾಡಿದ್ದಾರೆ. ಆದರೆ ಅಧಿಕಾರ ಉಳಸಿಕೊಳ್ಳಲು ಸಂವಿಧಾನದ ನಿಯಮಗಳನ್ನ ಉಲ್ಲಂಘನೆ ಮಾಡಿದ್ದಾರೆ. ಸಿಎಂ ಸ್ಥಾನದಲ್ಲಿ ಮುಂದುವರಿಯುವ ಯೋಗ್ಯತೆ ಕುಮಾರಸ್ವಾಮಿಗೆ ಇಲ್ಲ. ಹೀಗಾಗಿ ರಾಜ್ಯಪಾಲರಿಗೆ ದೂರು ಕೊಟ್ಟಿದ್ದೇವೆ ಎಂದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ರಾಜ್ಯದ ಜನ ದಂಗೆ ಏಳುವ ಕುರಿತು ಸಿಎಂ ನೀಡಿದ್ದ ಹೇಳಿಕೆಯನ್ನು ಖಂಡಿಸುತ್ತಿದ್ದಾರೆ. ಇಂದು ಬಿಜೆಪಿ ಎಲ್ಲಾ ಕಡೆ ಹೋರಾಟ ನಡೆಸಿದ್ದು, ಜನರು ಕೂಡ ಬೆಂಬಲ ನೀಡಿದ್ದಾರೆ. ನಮ್ಮ ಹೋರಾಟಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ರಾಜ್ಯಪಾಲರಿಗೆ ದೂರು ನೀಡಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ರಾಜ್ಯದ ಜನ ದಂಗೆ ಏಳುವ ಕುರಿತು ಸಿಎಂ ನೀಡಿದ್ದ ಹೇಳಿಕೆಯನ್ನು ಖಂಡಿಸುತ್ತಿದ್ದಾರೆ. ಇಂದು ಬಿಜೆಪಿ ಎಲ್ಲಾ ಕಡೆ ಹೋರಾಟ ನಡೆಸಿದ್ದು, ಜನರು ಕೂಡ ಬೆಂಬಲ ನೀಡಿದ್ದಾರೆ. ನಮ್ಮ ಹೋರಾಟಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ರಾಜ್ಯಪಾಲರಿಗೆ ದೂರು ನೀಡಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

Facebook Comments

Sri Raghav

Admin