ಐವರಿಗೆ ಚುಂಚಶ್ರೀ ಪ್ರಶಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

Chunchashree-Award--01

ಬೆಂಗಳೂರು, ಸೆ.21 – ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ಬಾಲಗಂಗಾಧರನಾಥ ಸ್ವಾಮೀಜಿಗಳ ಶ್ರೀಗುರು ಸಂಸ್ಮರಣೋತ್ಸವ ಹಾಗೂ 40ನೇ ರಾಜ್ಯಮಟ್ಟದ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳವನ್ನು ಇದೇ 23ರಿಂದ 25ರವರೆಗೆ ಏರ್ಪಡಿಸಲಾಗಿದೆ. ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯ ದಲ್ಲಿ 23ರಂದು ಸಂಜೆ 4 ಗಂಟೆಗೆ ನಡೆಯುವ ಜಾನಪದ ಕಲಾಮೇಳವನ್ನು ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡರು ಉದ್ಘಾಟಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಡಾ.ಎಚ್.ಎಲ್. ನಾಗೇಗೌಡ ಪ್ರಶಸ್ತಿಯನ್ನು ಸಚಿವೆ ಜಯಮಾಲಾ ಪ್ರದಾನ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಮಾಜಿ ಶಾಸಕ ಎಲ್.ಆರ್. ಶಿವರಾಮೇಗೌಡ, ವಿಧಾನಪರಿಷತ್ ಸದಸ್ಯರಾದ ಮರಿ ತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಮಂಡ್ಯ ಜಿಪಂ ಅಧ್ಯಕ್ಷೆ ನಾಗರತ್ನ ಸ್ವಾಮಿಗೌಡ, ತಾಪಂ ಅಧ್ಯಕ್ಷರಾದ ದಾಸೇಗೌಡ, ವಸಂತಮ್ಮ ಭಾಗವಹಿಸಲಿದ್ದಾರೆ.

24ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಚುಂಚಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಉದ್ಘಾಟಿಸಲಿದ್ದು, ಮುಖ್ಯ ಅತಿಥಿ ಗಳಾಗಿ ಶಾಸಕರಾದ ಸುರೇಶ್‍ಗೌಡ, ಎಂ.ಶ್ರೀನಿವಾಸ್ ಆಗಮಿಸಲಿದ್ದಾರೆ. ಖ್ಯಾತ ಸಂಗೀತ ವಿದ್ವಾಂಸ ಆರ್.ಕೆ. ಪದ್ಮನಾಭ, ಕಬಡ್ಡಿ ಪಟು ಬಿ.ಸಿ.ರಮೇಶ್, ಪಿಇಎಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಡಾ.ಎಚ್.ಡಿ. ಚೌಡಯ್ಯ, ವೈದ್ಯರಾದ ಡಾ.ಎ.ಸಿ.ಚನ್ನೇಗೌಡ, ನಿವೃತ್ತ ಐಎಎಸ್ ಅಧಿಕಾರಿ ಸಿ.ಚಿಕ್ಕಣ್ಣ ಅವರಿಗೆ ಮಠದ ವತಿಯಿಂದ ಚುಂಚಶ್ರೀ ಪ್ರಶಸ್ತಿಯನ್ನು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಪ್ರದಾನ ಮಾಡಲಿದ್ದಾರೆ. ಸಂಜೆ 5 ಗಂಟೆಗೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳವರ ಮುತ್ತಿನ ಪಲ್ಲಕ್ಕಿ ಉತ್ಸವ ಮತ್ತು ಜಾನಪದ ಕಲಾವಿದರ ಮೆರವಣಿಗೆ, ರಾತ್ರಿ 8.30ಕ್ಕೆ ಕಾಲ ಭೈರವೇಶ್ವರ ಪುಷ್ಕರಣಿಯಲ್ಲಿ ತೆಪ್ಪೋತ್ಸವ ನಡೆಯಲಿದೆ.

ಸೆ.25ರಂದು ಬೆಳಿಗ್ಗೆ 10 ಗಂಟೆಗೆ ಬಾಲಗಂಗಾಧರನಾಥ ಸ್ವಾಮಿಗಳ ಗುರು ಸಂಸ್ಮರಣೋತ್ಸವ ಮತ್ತು ಜಾನಪದ ಕಲಾ ಮೇಳದ ಸಮಾರೋಪ ಸಮಾರಂಭ ನಡೆಯಲಿದ್ದು, ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಎನ್.ಮಹೇಶ್, ಶಾಸಕರಾದ ಕೆ.ಅನ್ನದಾನಿ, ನಾರಾಯಣಗೌಡ, ರವೀಂದ್ರ ಶ್ರೀಕಂಠಯ್ಯ, ಜಯರಾಮ್, ಮೇಲ್ಮನೆ ಸದಸ್ಯ ಅಪ್ಪಾಜಿಗೌಡ ಪಾಲ್ಗೊಳ್ಳಲಿದ್ದಾರೆ.

Facebook Comments

Sri Raghav

Admin