ಒಡಿಶಾ, ಆಂಧ್ರಕ್ಕೆ ಅಪ್ಪಳಿಸಿದ ಭೀಕರ ಚಂಡಮಾರುತ..!

ಈ ಸುದ್ದಿಯನ್ನು ಶೇರ್ ಮಾಡಿ

Andra--01

ವೈಜಾಗ್, ಸೆ.21(ಪಿಟಿಐ)-ಒಡಿಶಾ ಮತ್ತು ಆಂಧ್ರ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸಿದ್ದು, ಭಾರಿ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುನ್ನೆಚ್ಚರಿಕೆ ನೀಡಿರುವುದರಿಂದ ಈ ಎರಡು ರಾಜ್ಯಗಳು ಪರಿಸ್ಥಿತಿ ನಿಭಾಯಿಸಲು ಸಜ್ಜಾಗಿವೆ.

ಮುಂದಿನ 24 ಗಂಟೆಗಳಲ್ಲಿ ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿ ಪ್ರದೇಶಗಳ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಬಂಗಾಳ ಕೊಲ್ಲಿಯ ಪಶ್ಚಿಮ-ಕೇಂದ್ರ ಪ್ರದೇಶದಲ್ಲಿ ಕಡಿಮೆ ಒತ್ತಡದ ವಾತಾವರಣ ಸ್ಥಿತಿಯು ಗುರುವಾರ ತೀವ್ರ ವಾಯುಭಾರ ಕುಸಿತಕ್ಕೆ ಕಾರಣವಾಗಿ ಪ್ರಬಲ ಚಂಡಮಾರುತದ ಸ್ವರೂಪ ಪಡೆದುಕೊಂಡಿದ್ದು, ಯಾವುದೇ ಘಳಿಗೆಯಲ್ಲಿ ಸಮುದ್ರ ಸುಂಟರಗಾಳಿ ಒಡಿಶಾ ಮತ್ತು ಆಂಧ್ರ ಕರಾವಳಿ ಪ್ರದೇಶಗಳ ಮೇಲೆ ಅಪ್ಪಳಿಸಿದೆ ಎಂದು ಐಎಂಡಿ ಸೈಕ್ಲೋನ್ ಎಚ್ಚರಿಕೆ ಕೇಂದ್ರದ ಅಧಿಕಾರಿ ಶಾಸ್ತ್ರಿ ಹೇಳಿದ್ದಾರೆ.

ಆಳ ಪ್ರಬಲ ವಾಯುಭಾರ ಕುಸಿತ ಪಶ್ಚಿಮ-ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ. ಇದು ಬಂಗಾಳ ಕೊಲ್ಲಿಯಲ್ಲಿ ಕೇಂದ್ರೀಕೃತವಾಗಲಿದ್ದು, ಸಮುದ್ರ ಸುಂಟರಗಾಳಿಯ ಪ್ರಕೋಪ ಒಡಿಶಾ ಮತ್ತು ಆಂಧ್ರ ರಾಜ್ಯಗಳಿಗೆ ಎದುರಾಗಿದೆ ಎಂದು ಅವರು ಮುನ್ನೆಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ನೈಸರ್ಗಿಕ ಪ್ರತಿಕೂಲ ಪರಿಸ್ಥಿತಿಯನ್ನು ನಿಭಾಯಿಸಲು ರಕ್ಷಣಾ ದಳಗಳು ಸಜ್ಜಾಗಿವೆ.

Facebook Comments

Sri Raghav

Admin