ಎಸ್‍ಸಿ/ಎಸ್ಟಿ ಮೀಸಲಾತಿ ಜಾರಿ ನಮ್ಮ ಬದ್ಧತೆ : ಪ್ರಿಯಾಂಕ್ ಖರ್ಗೆ

ಈ ಸುದ್ದಿಯನ್ನು ಶೇರ್ ಮಾಡಿ

Priyank-Kharge

ಬೆಂಗಳೂರು, ಸೆ.22-ಎಸ್ಸಿ-ಎಸ್ಟಿ ಬಡ್ತಿ ಮೀಸಲಾತಿ ಜಾರಿಯಾಗ ಲೇಬೇಕು. ಇದು ನಮ್ಮ ಬದ್ಧತೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದಲ್ಲಿಂದು ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಎಸ್ಸಿ-ಎಸ್ಟಿ ಬಿಲ್ ಜಾರಿ ಸಂಬಂಧ ಸಂಪುಟ ಸಭೆಯಲ್ಲಿ ಆಗ್ರಹಪಡಿಸಿದ್ದರ ಬಗ್ಗೆ ಬಹಿರಂಗವಾಗಿ ನಾನು ಏನನ್ನೂ ಮಾತನಾಡುವುದಿಲ್ಲ. ಆದರೆ ಇದು ಜಾರಿಯಾಗಬೇಕು ಎಂಬ ಆಶಯ ನಮ್ಮದು. ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಜಾರಿ ಮಾಡುವ ವಿಶ್ವಾಸ ನಮಗಿದೆ ಎಂದರು. ವಿಚಾರ ಸುಪ್ರೀಂಕೋರ್ಟ್ ಮುಂದಿರುವುದರಿಂದ ಸ್ವಲ್ಪ ವಿಳಂಬವಾಗಬಹುದು. ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ತಡೆಯೊಡ್ಡುತ್ತಿದ್ದಾರೆ ಎನ್ನುವುದು ಸುಳ್ಳು. ನಮಗೆ ಈ ವಿಚಾರದಲ್ಲಿ ಬದ್ಧತೆ ಇದೆ. ನಾವು ಜಾರಿ ಮಾಡುತ್ತೇವೆ ಎಂದು ಹೇಳಿದರು.

Facebook Comments

Sri Raghav

Admin