ಪತ್ರಕರ್ತ ರವಿ ಬೆಳಗೆರೆಗೆ ಲಘು ಹೃದಯಾಘಾತ..!

ಈ ಸುದ್ದಿಯನ್ನು ಶೇರ್ ಮಾಡಿ

Ravi-Belegere--01

ಬೆಂಗಳೂರು, ಸೆ.22- ಪತ್ರಕರ್ತ ರವಿ ಬೆಳಗೆರೆಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.  ತೀವ್ರ ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪದಲ್ಲಿ ರವಿ ಬೆಳೆಗೆರೆ ಜಾಮೀನಿನ ಮೇಲೆ ಹೊರಗಿದ್ದಾರೆ.

ಕೆಲ ತಿಂಗಳಿಂದ ಅಷ್ಟೇ ರವಿ ಬೆಳಗೆರೆ ಅವರು ಇದೇ ಹೃದಯ ಸಂಬಂಧಿ ಕಾಯಿಲೆಗೆ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರವಿ ಬೆಳಗೆರೆಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.

Ravi-Belegere--03

Ravi-Belegere--02

Facebook Comments

Sri Raghav

Admin