ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಆಯುಷ್ಮಾನ್ ಭಾರತ್‍’ ಯೋಜನೆಗೆ ನಾಳೆ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

Ayushman-Bharat--01

ನವದೆಹಲಿ, ಸೆ.22-ನಾಳೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ್-ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆ(ಎಬಿ-ಎನ್‍ಎಚ್‍ಪಿಎಸ್) ವಿಧ್ಯುಕ್ತವಾಗಿ ಜಾರಿಗೆ ಬರಲಿದೆ. ಜಾರ್ಖಂಡ್‍ನಲ್ಲಿ ನಾಳೆ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಯೋಜನೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಜನಸಂಘದ ಸಹಸಂಸ್ಥಾಪಕ ದೀನ್ ದಯಾಳ್ ಅವರ ಜನ್ಮದಿನವಾದ ಸೆ.25ರಿಂದ ಈ ಯೋಜನೆ ಜಾರಿಯಾಗಲಿದೆ.

ರಾಷ್ಟ್ರದ 10 ಕೋಟಿ ಕುಟುಂಬಗಳ 50 ಕೋಟಿಗೂ ಅಧಿಕ ಮಂದಿಗೆ ಆರೋಗ್ಯ ವಿಮೆ ಒದಗಿಸುವ ವಿಶ್ವದ ಅತಿದೊಡ್ಡ ಯೋಜನೆಯಾಗಿರುವ ಆಯುಷ್ಮಾನ್ ಭಾರತ್‍ನನ್ನು ಸ್ವಾತಂತ್ರ್ಯೋತ್ಸವದ ತಮ್ಮ ಕೊನೆ ಭಾಷಣದಲ್ಲಿ ಮೋದಿ ಪ್ರಕಟಿಸಿದ್ದರು. ಈ ಯೋಜನೆಯಡಿ ಕುಟುಂಬವೊಂದಕ್ಕೆ ವಾರ್ಷಿಕ ತಲಾ 5 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ ಒದಗಿಸಲಾಗುತ್ತದೆ. ಮೊದಲ ಹಂತವಾಗಿ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಬಿ-ಎನ್‍ಎಚ್‍ಪಿಎಸ್‍ನನ್ನು ಜಾರಿಗೊಳಿಸಲಾಗುತ್ತದೆ.

ಪ್ರಥಮ ಹಂತದಲ್ಲಿ ಜಾರ್ಖಂಡ್, ಛತ್ತೀಸ್‍ಗಢ, ತ್ರಿಪುರ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ, ಚಂಡೀಗಢ, ದಮನ್ ಮತ್ತು ಡಿಯು, ಗುಜರಾತ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಅನುಷ್ಠಾನಗೊಳ್ಳಲಿದೆ. ಈ ಯೋಜನೆಯಲ್ಲಿ 100 ಆಸ್ಪತ್ರೆಗಳಿದ್ದು, ಬಹುತೇಕ ಸರ್ಕಾರಿ ವಲಯದ್ದಾಗಿರುತ್ತದೆ. ಮೊದಲಿಗೆ ಶಸ್ತ್ರಚಿಕಿತ್ಸೆಗಳು ಮತ್ತು ಇತರ ವೈದ್ಯಕೀಯ ಚಿಕಿತ್ಸೆ ಸೇವೆಗಳನ್ನು ಆರಂಭಿಸಲಾಗುತ್ತದೆ. ಈ ಯೋಜನೆಯಲ್ಲಿ 1,000ಕ್ಕೂ ಹೆಚ್ಚು ಅನಾರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.

ಯೋಜನೆಯ ವಿಶೇಷತೆಗಳೇನು :
ಪ್ರಧಾನಿ ನರೇಂದ್ರ ಮೋದಿಯವರು 72ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದೇಶವನ್ನುದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಭಾರತೀಯ ಆರೋಗ್ಯ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ಘೋಷಿದ್ದಾರೆ. ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಆಯುಷ್ಮಾನ್ ಭಾರತ್ ಅಥವಾ ಮೋದಿ ಕೇರ್ ಎಂಬುದಾಗಿ ಕರೆಯಲ್ಪಡುತ್ತದೆ. ವಿಶ್ವದ ಅತಿದೊಡ್ಡ ಆರೋಗ್ಯ ರಕ್ಷಾ ಕವಚ ಆಯುಷ್ಮಾನ್ ಭಾರತ್ ಯೋಜನೆಯಾಗಿದ್ದು, ದೇಶದ ಜನರು ಆರೋಗ್ಯವಾಗಿರಬೇಕು ಎಂಬ ಉದ್ದೇಶದೊಂದಿಗೆ ಪ್ರಧಾನ ಮಂತ್ರಿ ಆರೋಗ್ಯ ಅಭಿಯಾನ ಘೋಷಣೆ ಮಾಡಿದರು.

ರಾಷ್ಟ್ರೀಯ ಆರೋಗ್ಯ ರಕ್ಷಣಾ ಮಿಷನ್ (ಎಬಿ-ಎನ್ಎಚ್ ಪಿಎಂ) ಭಾಗವಾಗಿರುವ ಆಯುಷ್ಮಾನ್ ಭಾರತ್ ಯೋಜನೆಯು 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಸೌಲಭ್ಯ ಒದಗಿಸುವ ಗುರಿ ಹೊಂದಿದೆ. ಪ್ರಧಾನ ಮಂತ್ರಿ ಆರೋಗ್ಯ ಅಭಿಯಾನ ಮೊದಲ ಹಂತದಲ್ಲಿ ತ್ರಿಪುರ, ಛತ್ತೀಸ್‍ಗಢ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಚಂಡೀಗಢ, ಆಂಧ್ರಪ್ರದೇಶ, ಮಧ್ಯಪ್ರದೇಶ, ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ 70 ರಿಂದ 80 ಜಿಲ್ಲೆಗಳಲ್ಲಿ ಆರಂಭವಾಗಲಿದೆ.

ಒಂದು ಕುಟುಂಬಕ್ಕೆ ವಾರ್ಷಿಕವಾಗಿ 5 ಲಕ್ಷವರೆಗೆ ಆರೋಗ್ಯ ವಿಮೆ ಕಲ್ಪಿಸಲಾಗುತ್ತದೆ. ಪ್ರಸ್ತುತ ಯೋಜನೆಗೆ ನೋಂದಾಯಿಸಿಕೊಂಡಿರುವ ರಾಜ್ಯಗಳ ಆರೋಗ್ಯ ಯೋಜನೆ, ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆ ಫಲಾನುಭವಿಗಳು ಕೂಡ ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳಾಗಲಿದ್ದಾರೆ.  ವಿಮಾ ಸೌಲಭ್ಯ ಅರ್ಹತೆ – ಮಾನದಂಡ ಆಯುಷ್ಮಾನ್ ಭಾರತ್ ಯೋಜನೆಯ ಸೌಲಭ್ಯ ಪಡೆಯಲು ಪಡಿತರ ಚೀಟಿ ಇರಬೇಕಾಗುತ್ತದೆ. ಈ ಯೋಜನೆಗೆ ಆಧಾರ್ ಕಾರ್ಡ್ ಕಡ್ಡಾಯ ಅಲ್ಲ. ರೇಷನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಮತದಾರರ ಚೀಟಿ ಯಾವುದಿದ್ದರೂ ಸಾಕು. ಕುಟುಂಬದ ಗಾತ್ರ ಹಾಗು ನಿಮ್ಮ ವಯಸ್ಸಿಗೆ ಯಾವುದೇ ಮಿತಿ ಇರುವುದಿಲ್ಲ. ಫಲಾನುಭವಿಗಳಿಗೆ ಆಸ್ಪತ್ರೆಗೆ ಸಂಚರಿಸಲು ನಿಗದಿತ ಪ್ರಯಾಣಕ್ಕೆ ಭತ್ಯೆಯೂ ಸಿಗಲಿದೆ. ಒಮ್ಮೆ ನೋಂದಾಯಿಸಿದರೆ ಒಂದು ವರ್ಷದವರೆಗೆ ಸೌಲಭ್ಯವಿರುತ್ತದೆ.

 

Facebook Comments

Sri Raghav

Admin