ಬಿಜೆಪಿಯವರ ನಾಟಕ ನಡೆಯಲ್ಲ, ಮೈತ್ರಿ ಸರ್ಕಾರ ಸುಭದ್ರವಾಗಿದೆ : ಡಿಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Parameshwar--01

ಬೆಂಗಳೂರು, ಸೆ.23- ಬಿಜೆಪಿಯವರ ಯಾವುದೇ ರಾಜಕೀಯ ನಾಟಕ ನಡೆಯುವುದಿಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಸುಭದ್ರವಾಗಿದೆ. ನೀವು ಮಾಧ್ಯಮದವರು ಈ ಬಗ್ಗೆ ಯಾವುದೇ ಟೆನ್ಷನ್ ತಗೋಬೇಡಿ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನಿಮ್ಮ ಪಕ್ಷದ ಮೂವರು ಶಾಸಕರು ನಾಪತ್ತೆಯಾಗಿದ್ದಾರಲ್ಲ, ಅವರ ಮೊಬೈಲ್ ನಾಟ್‍ರೀಚಬಲ್ ಆಗಿದೆಯಲ್ಲ ಎಂಬ ವರದಿಗಾರರ ಪ್ರಶ್ನೆಗೆ ನಮ್ಮ ಶಾಸಕರೆಲ್ಲ ಒಗ್ಗಟ್ಟಾಗಿದ್ದೇವೆ. ಯಾರ ಮೊಬೈಲ್ ನಾಟ್ ರೀಚಬಲ್ ಆಗಿಲ್ಲ. ಅವರು ದೇವಸ್ಥಾನಕ್ಕೆ ಹೋಗಿದ್ದಾರೆ. ನಿನ್ನೆ ರಾತ್ರಿ ಕೂಡ ನಾನು ಮೂವರು ಶಾಸಕರೊಂದಿಗೆ ಮಾತನಾಡಿದ್ದೇನೆ. ಸರ್ಕಾರ ಒಡೆಯುವ ಕೆಲಸಕ್ಕೆ ಅವರು ಕೈ ಹಾಕುವುದಿಲ್ಲ ಎಂದು ಉತ್ತರಿಸಿದರು.  ಕೆಲ ಕಾಂಗ್ರೆಸ್ ಶಾಸಕರೇ ನಾಟಕ ಆಡುತ್ತಿದ್ದಾರಂತಲ್ಲ ಎಂಬ ಮತ್ತೊಂದು ಪ್ರಶ್ನೆಗೆ ನಮ್ಮ ಶಾಸಕರು ನಾಟಕ ಆಡುತ್ತಿಲ್ಲ, ನಮ್ಮ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ ತಾವು ಸರ್ಕಾರ ರಚಿಸುವ ಕನಸನ್ನು ಬಿಜೆಪಿಯವರು ಕಾಣುತ್ತಿದ್ದಾರೆ. ಅದು ನನಸಾಗಲ್ಲ ಎಂದರು.

# ಕಾನೂನಿಗಿಂತ ಯಾರೂ ದೊಡ್ಡವರಲ್ಲ:
ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ಯಾರೇ ತಪ್ಪು ಮಾಡಿರಲಿ, ಅಂತಹವರ ವಿರುದ್ಧ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ. ನಟ ದುನಿಯಾ ವಿಜಯ್ ವಿಚಾರದಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

# ಸಂಪುಟ ವಿಸ್ತರಣೆ:
ವಿಧಾನ ಪರಿಷತ್ ಉಪಚುನಾವಣೆ ಮುಗಿದ ಕೂಡಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಇದಕ್ಕೆ ಹೈಕಮಾಂಡ್ ಈಗಾಗಲೇ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಹೇಳಿದರು.ಸೆ.28ರಂದು ನಡೆಯಲಿರುವ ಬಿಬಿಎಂಪಿ ಮೇಯರ್ ಚುನಾವಣೆಗೆ ಯಾರನ್ನು ಅಭ್ಯರ್ಥಿ ಮಾಡಬೇಕೆಂಬ ಬಗ್ಗೆ ಇದೇ 26ರಂದು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಇದೇ ವೇಳೆ ತಿಳಿಸಿದರು.

Facebook Comments

Sri Raghav

Admin