ಎಂಟಿಬಿ ನಾಗರಾಜ್ ಮನೆಗೆ ಸಚಿವರು ಭೇಟಿನೀಡಿದ್ದೇಕೆ..?

ಈ ಸುದ್ದಿಯನ್ನು ಶೇರ್ ಮಾಡಿ

Nagaraj--01

ಬೆಂಗಳೂರು, ಸೆ.23- ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜ್ ಅವರ ಮನೆಗೆ ಸಚಿವರಾದ ಡಿ.ಕೆ.ಶಿವಕುಮಾರ್, ಜಮೀರ್ ಅಹಮ್ಮದ್ ಖಾನ್, ಕೃಷ್ಣಬೈರೇಗೌಡ ಭೇಟಿ ನೀಡಿ ಮಾತುಕತೆ ನಡೆಸಿದರು. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ನಾಗರಾಜ್ ಪಕ್ಷ ತೊರೆಯುತ್ತಾರೆ ಎಂಬ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಸಚಿವರ ಈ ಭೇಟಿ ಕುತೂಹಲ ಕೆರಳಿಸಿದೆ.

ಇಂದು ಬೆಳಗ್ಗೆ ಈ ಮೂವರು ಸಚಿವರು ಎಂಟಿಬಿ ನಾಗರಾಜ್ ಅವರ ಮನೆಗೆ ಭೇಟಿ ನೀಡಿ ಮನವೊಲಿಸುವ ಕೆಲಸ ಮಾಡಿದ್ದಾರೆ.   ನಿನ್ನೆಯಷ್ಟೇ ಶಾಸಕರಾದ ಸುಧಾಕರ್, ಗಣೇಶ್ ಹಾಗೂ ಎಂ.ಟಿ.ಬಿ.ನಾಗರಾಜ್ ಅವರುಗಳು ರೆಸಾರ್ಟ್‍ಗೆ ಹೊರಟಿದ್ದಾರೆ. ಅವರ ಮೊಬೈಲ್‍ಗಳು ನಾಟ್‍ರೀಚಬಲ್ ಆಗಿವೆ. ಆಪರೇಷನ್ ಕಮಲಕ್ಕೆ ಒಳಗಾಗುತ್ತಾರೆ ಎಂಬೆಲ್ಲಾ ಸುದ್ದಿ ಹರಡಿತ್ತು.

ಈ ವದಂತಿ ಹಿನ್ನೆಲೆಯಲ್ಲಿ ಇಂದು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಜಮೀರ್ ಅಹಮ್ಮದ್‍ಖಾನ್ ಹಾಗೂ ಕೃಷ್ಣಬೈರೇಗೌಡ ಅವರು ನಾಗರಾಜ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಮ್ಮ ಪಕ್ಷದ ಹಿರಿಯ ಮುಖಂಡ ಎಂ.ಟಿ.ಬಿ.ನಾಗರಾಜ್ ಅವರನ್ನು ಪಕ್ಷ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ. ಅವರು ಸಚಿವ ಸ್ಥಾನಕ್ಕೆ ಅರ್ಹರು. ಅವರಲ್ಲಿ ಯಾವುದೇ ಅತೃಪ್ತಿ ಇಲ್ಲ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ. ಬಿಜೆಪಿಯವರ ಊಹಾಪೋಹಗಳಿಗೆ ಯಾರೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದರು.

Facebook Comments

Sri Raghav

Admin