ಮೈಸೂರಿನ ಹಿನಕಲ್ ಬಳಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ..!

ಈ ಸುದ್ದಿಯನ್ನು ಶೇರ್ ಮಾಡಿ

Darshan--01
ಮೈಸೂರ ಸೆ. : ಮೈಸೂರು ಹೊರ ವಲಯದ ಹಿನಕಲ್ ಜಂಕ್ಷನ್ ಬಳಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತಕ್ಕೀಡಾಗಿದ್ದು, ದರ್ಶನ್ ಸೇರಿದಂತೆ ನಾಲ್ಕು ಜನರಿಗೆ ಗಂಭೀರ ಗಾಯವಾಗಿದೆ ಎನ್ನಲಾಗುತ್ತಿದೆ. ದರ್ಶನ್ ಅವರೊಂದಿಗೆ ನಟರಾದ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಸಹ ಅದೇ ಪ್ರಯಾಣಿಸುತ್ತಿದ್ದರು. ಅವರಿಗೂ ಗಾಯವಾಗಿದ್ದು, ಮೂವರಿಗೂ ಮೈಸೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆಯಲ್ಲಿ , ಬೆಳಿಗ್ಗೆ ಸುಮಾರು ಮೂರು ಗಂಟೆಯ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಅಪಘಾತದಲ್ಲಿ ದರ್ಶನ್ ಕೈ ಮುರಿದಿದ್ದು ದೇವರಾಜ್ ಅವರಿಗೂ ಗಂಭೀರ ಗಾಯಗಳಾಗಿವೆ ಎನ್ನಲಾಗುತ್ತಿದೆ. ಆದರೆ ಈ ಘಟನೆ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿಗಳು ಲಾಭಯವಾಗಬೇಕಿದೆ.

ದರ್ಶನ್‌ ಅಭಿನಯದ “ಒಡೆಯ’ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರು. ನಟ ಪ್ರಜ್ವಲ್ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನೆನ್ನಿ ಮೈಸೂರಿನಲ್ಲಿ ವಿವಿಧ ಕಾರ್ಯಕಮಗಳಲ್ಲಿ ಪಾಲ್ಗೊಂಡ ದರ್ಶನ್ ತಡರಾತ್ರಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ. “ಒಡೆಯ’ ಚಿತ್ರವನ್ನು ಎಂ.ಡಿ.ಶ್ರೀಧರ್‌ ನಿರ್ದೇಶನ ಮಾಡುತ್ತಿದ್ದು ಈ ಹಿಂದೆ ದರ್ಶನ ರ “ಪೊರ್ಕಿ’ ಮತ್ತು “ಬುಲ್‌ಬುಲ್‌’ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದರು.

Darshan--02

Darshan--03

Facebook Comments

Sri Raghav

Admin