ಯಲಹಂಕ ಓಲ್ಡ್ ಟೌನ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಭೀಕರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Congress-Murder

ಬೆಂಗಳೂರು, ಸೆ.24 – ಯಲಹಂಕ ಓಲ್ಡ್ ಟೌನ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರುಣ್ ಕುಮಾರ್ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಭಾನುವಾರ ತಡರಾತ್ರಿ 2.30ರ ಸುಮಾರಿಗೆ ಮನೆಗೆ ಬರುತ್ತಿದ್ದ ವೇಳೆ ಅರುಣ್ ಕುಮಾರ್ ಅವರನ್ನು ಅಲ್ಲಾಳಸಂದ್ರ ಗೇಟ್ ಬಳಿ ಐವರ ತಂಡ ಮಚ್ಚು ಲಾಂಗುಗಳಿಂದ ಹಲ್ಲೆ ಮಾಡಿ ಪರಾರಿಯಾಗಿದೆ. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಯಲಹಂಕ ಠಾಣಾ ಪೂಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಮೀಪದಲ್ಲಿ ಅಳವಡಿಸಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪೂಲೀಸರು ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Facebook Comments

Sri Raghav

Admin