ಇನ್ನೂ 2 ದಿನ ‘ಕರಿಚಿರತೆ’ಗೆ ಜೈಲೇ ಗತಿ..!

ಈ ಸುದ್ದಿಯನ್ನು ಶೇರ್ ಮಾಡಿ

Duniya-Vijay--01

ಬೆಂಗಳೂರು. ಸೆ. : ಮಾರುತಿ ಗೌಡ ಅಪಹರಣ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಿ ಹಾಗೂ ಸಹಚರರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು 8ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ಜಾಮೀನು ಆದೇಶವನ್ನು ಸೆ.26ಕ್ಕೆ ಕಾಯ್ದಿರಿಸಿದ್ದು, ದುನಿಯಾ ವಿಜಿ ಹಾಗೂ ಆಪ್ತರಿಗೆ ಸದ್ಯ ಜೈಲೇ ಗತಿಯಾಗಿದೆ.

ಹಲ್ಲೆ ಮತ್ತು ಅಪಹರಣ ಪ್ರಕರಣದಲ್ಲಿ ನಟ ದುನಿಯಾ ವಿಜಯ್ ಆರೋಪಿಯಾಗಿದ್ದು, ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದುನಿಯಾ ವಿಜಯ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಮಾರುತಿ ಗೌಡ ಮೇಲೆ ಹಲ್ಲೆ ಮಾಡಿದ, ಅಪಹರಣ ಪ್ರಕರಣದಲ್ಲಿ ದುನಿಯಾ ವಿಜಯ್, ಕಾರು ಚಾಲಕ ಪ್ರಸಾದ್, ವಿಜಯ್ ಸ್ನೇಹಿತ ಪ್ರಸಾದ್, ಮಣಿ ಆರೋಪಿಗಳಾಗಿದ್ದರು. ದುನಿಯಾ ವಿಜಯ್ ಪರ ವಕೀಲರು ಸೋಮವಾರ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಇಂದು ವಾದ, ಪ್ರತಿವಾದ ಆಲಿಸಿದ ನಂತರ ನ್ಯಾಯಾಧೀಶರು ಜಾಮೀನು ತೀರ್ಪನ್ನು ಕಾಯ್ದಿರಿಸಿದ್ದು, ಸೆ.26ರಂದು ಆದೇಶ ಹೊರಬೀಳಲಿದೆ. ಕರಣ ಸಂಬಂಧ ವಿಜಯ್, ಪ್ರಸಾದ್, ಮಣಿ, ಕಾರು ಚಾಲಕ ಪ್ರಸಾದ್ ಸೇರಿದಂತೆ ನಾಲ್ವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು.

ಶನಿವಾರ ತಡರಾತ್ರಿ ಅಂಬೇಡ್ಕರ್ ಭವನದಲ್ಲಿ ನಡೆದ ಬಾಡಿ ಬಿಲ್ಡಿಂಗ್ ಸ್ಪರ್ಧೆ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾರುತಿ ಗೌಡನ ಜತೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿತ್ತು. ಈ ವೇಳೆ ನಟ ವಿಜಯ್, ಅವರ ಸ್ನೇಹಿತರಾದ ಪ್ರಸಾದ್, ಮಣಿ ಎಂಬವರು ಸೇರಿ ಮಾರುತಿ ಗೌಡನನ್ನು ಅಪಹರಿಸಿ ಕಾರಿನಲ್ಲಿ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

ನಟ ದುನಿಯಾ ವಿಜಯ್ 2ನೇ ಪತ್ನಿ ಕೀರ್ತಿ ಗೌಡ ಅವರು ಜಾಮೀನು ಸಿಗುವ ನಿರೀಕ್ಷೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿದ್ದರು. ಪತಿಯನ್ನು ಭೇಟಿ ಮಾಡಲು ಕಾದು ಕುಳಿತಿದ್ದರು ಆದರೆ, ಭೇಟಿಗೆ ಅವಕಾಶ ಸಿಗಲಿಲ್ಲ.  ಇನ್ನು ಹಲ್ಲೆಗೊಳಗಾ ಮಾರುತಿ ಗೌಡ ಸಂಬಂಧಿಕರಾದ ಪಾನಿಪೂರಿ ಕಿಟ್ಟಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸುವಂತೆ ಮನವಿ ಮಾಡಿದ್ದರು. ಎಸ್‌ಪಿಪಿ ನೇಮಕ ಮಾಡಲಾಗಿದೆ.

Facebook Comments

Sri Raghav

Admin