ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ದಾಳಿ, 6 ಮಂದಿ ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

6-Arrested
ಬೆಂಗಳೂರು, ಸೆ.25- ವಿದೇಶಿ ಮತ್ತು ಹೊರ ರಾಜ್ಯದ ಹುಡುಗಿಯರನ್ನು ಕರÉತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎರಡು ಪ್ರತ್ಯೇಕ ಅಡ್ಡೆಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಉಜ್ಬೇಕಿಸ್ತಾನದ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ರಕ್ಷಿಸಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕೆ.ಅನುಪ್ ರಾಘವನ್, ಸೂರಜ್ ಬಿಸ್ವಾಸ್, ತಪಸ್ ಕುಮಾರ್, ಪ್ರವಾಸ್ ಬಿಸ್ವಾಸ್, ತನುಶ್ (24), ರಮಣಯ್ಯ (45) ಬಂಧಿತ ಆರೋಪಿಗಳು.
ಜಯಮಹಲ್ ಮುಖ್ಯರಸ್ತೆಯಲ್ಲಿರುವ ಸರ್ವೀಸ್ ಅಪಾರ್ಟ್‍ಮೆಂಟ್‍ನಲ್ಲಿ ಹೊರ ರಾಜ್ಯ ಮತ್ತು ಹೊರ ದೇಶದ ಹುಡುಗಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಸಿಸಿಬಿ ಮಹಿಳೆ ಮತ್ತು ಮಾದಕ ದ್ರವ್ಯ ದಳದ ಅಧಿಕಾರಿಗಳು ದಾಳಿ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಉಜ್ಬೇಕಿಸ್ತಾನದ ಇಬ್ಬರು ಮಹಿಳೆಯರ ಸಹಿತ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ.

ಆರೋಪಿಗಳಿಂದ 12 ಮೊಬೈಲ್ ಫೋನ್, 36000 ನಗದು, ಒಂದು ಕಾರು, ಒಂದು ಸ್ವೈಪಿಂಗ್ ಯಂತ್ರವನ್ನು ವಶಪಡಿಸಿಕೊಂಡು ಅವರ ವಿರುದ್ಧ ಜೆ.ಸಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದನಗರ, ಎಸ್‍ಬಿಎಂ ಕಾಲೋನಿಯಲ್ಲಿರುವ ಮನೆಯೊಂದರಲ್ಲಿ ಕೊಠಡಿಯನ್ನು ಬಾಡಿಗೆಗೆ ಪಡೆದು ಹೊರ ರಾಜ್ಯದಿಂದ ಯುವತಿಯರನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಇಬ್ಬರನ್ನು ಬಂಧಿಸಿ, ಪಶ್ಚಿಮಬಂಗಾಳ ಮೂಲದ ಒಬ್ಬ ಮಹಿಳೆಯನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 20 ಸಾವಿರ ರೂ.ನಗದು ಮತ್ತು 3 ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳು ಸಂಘಟಿತ ರೀತಿಯಲ್ಲಿ ವೇಶ್ಯಾವಾಟಿಕೆ ಜಾಲ ಹೊಂದಿದ್ದರು. ಹೊರ ರಾಜ್ಯಗಳಿಂದ ಅಮಾಯಕ ಹೆಣ್ಣು ಮಕ್ಕಳನ್ನು ಮಾನವ ಕಳ್ಳಸಾಗಣೆ ಮೂಲಕ ಕರೆತಂದು ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಗಿರಾಕಿಗಳನ್ನು ಫೋನ್ ಮೂಲಕ ಸಂಪರ್ಕ ಮಾಡಿ ವೇಶ್ಯಾವಾಟಿಕೆ ದಂಧೆ ನಡೆಸಿ ಅಕ್ರಮವಾಗಿ ಹಣ ಸಂಪಾದಿಸುತ್ತಿರುವುದು ವಿಚಾರಣೆಯಿಂದ ತಿಳಿದುಬಂದಿದೆ.

ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಘಟಕದ ಕೇಂದ್ರ ಅಪರಾಧ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಬಿ.ಎಸ್. ಮೋಹನ್ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ವಿ.ಡಿ. ಶಿವರಾಜು ಮತ್ತು ಆಯೇಷಾ ಹಾಗೂ ಮತ್ತೊಂದು ತಂಡ ಪೊಲೀಸ್ ಇನ್ಸ್‍ಪೆಕ್ಟರ್ ಕೆ.ನಾರಾಯಣ ಗೌಡ, ಪಿಎಸ್‍ಐ ಲಕ್ಷ್ಮೀನರಸಿಂಹಯ್ಯ ಅವರ ನೇತೃತ್ವದಲ್ಲಿ ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿದೆ.

Facebook Comments

Sri Raghav

Admin