ದರ್ಶನ್ ಕಾರು ಅಪಘಾತ ಪ್ರಕರಣ, ಚಾಲಕ ಆಂಟೋನಿ ಮೇಲೆ ಎಫ್‍ಐಆರ್

ಈ ಸುದ್ದಿಯನ್ನು ಶೇರ್ ಮಾಡಿ

Darshan-Accident
ಮೈಸೂರು, ಸೆ.25- ನಟ ದರ್ಶನ್ ಅವರಿದ್ದ ಕಾರು ಅಪಘಾತಕ್ಕೀಡಾದ ಪ್ರಕರಣಕ್ಕೆ ಸಂಬಂಧಿಸಿ ಕಾರಿನ ಚಾಲಕ ರಾಯ್ ಆಂಟೋನಿ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾನೂನು ಪ್ರಕ್ರಿಯೆ ಯಿಂದ ಬಚಾವಾಗಿದ್ದಾರೆ.

ದರ್ಶನ್ ಅವರ ಖಾಸಗಿ ಗನ್‍ಮ್ಯಾನ್ ಮತ್ತು ಚಾಲಕನಾಗಿರುವ ಲಕ್ಷ್ಮಣ್ ಇಂದು, ರಾಯ್ ಆಂಟೋನಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದಲ್ಲಿ ರಾಯ್ ಆಂತೋನಿ ಮಾತ್ರ ಏಕೈಕ ಆರೋಪಿಯಾಗಿದ್ದು, ಲಕ್ಷ್ಮಣ್ ನೀಡಿದ ದೂರಿನ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ಸೋಮವಾರ ಬೆಳಗ್ಗಿನ ಜಾವ ಸುಮಾರು 2.30 ಗಂಟೆ ಕಾರಿನ ಚಾಲಕ ರಾಯ್ ಆಂಟೋನಿ ಅವರು ಕಾರಿನಲ್ಲಿ ನಟರಾದ ದರ್ಶನ್, ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರನ್ನು ಕೂರಿಸಿಕೊಂಡು ರಿಂಗ್ ರಸ್ತೆ ಜಂಕ್ಷನ್ ತಿರುವಿನಲ್ಲಿ ಕಾರನ್ನು ನಿರ್ಲಕ್ಷ್ಯತೆಯಿಂದ ಚಾಲನೆ ಮಾಡಿಕೊಂಡು ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿಕಾರು ಅಪಘಾತಕ್ಕೀಡಾಗಿದ್ದು, ಇದರಿಂದ ದರ್ಶನ್ ಅವರ ಬಲಗೈ ಮೂಳೆ ಮುರಿದಿದೆ. ಅಲ್ಲದೇ ದೇವರಾಜ್ ಅವರ ಎದೆಯ ಭಾಗ ಹಾಗೂ ಎಡಗೈ ಬೆರಳಿಗೆ ಪೆಟ್ಟಾಗಿದ್ದು, ಪ್ರಜ್ವಲ್ ಅವರಿಗೆ ಸಣ್ಣಪುಟ್ಟ ಪೆಟ್ಟಾಗಿದೆ.

ಸದ್ಯ ಮೂವರು ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅಪಘಾತದ ವಿಚಾರ ತಿಳಿದು ನಾನು ಆಸ್ಪತ್ರೆಗೆ ಬಂದು ಗಾಯಗೊಂಡಿದ್ದ ನಟರನ್ನು ನೋಡಿದೆ. ಹೀಗಾಗಿ ಈ ಅಪಘಾತಕ್ಕೆ ಕಾರಣನಾದ ಕಾರು ಚಾಲಕ ರಾಯ್ ಆಂಟೋನಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಶನಿವಾರ ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ಸೋಮವಾರ ಮುಂಜಾನೆ ಅಲ್ಲಿಂದ ಹೊರಟಿದ್ದರು. ಕಾರ್‍ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಬಲಗೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.

# ದೇವರಾಜ್, ಪ್ರಜ್ವಲ್ ದೇವರಾಜ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಸೋಮವಾರ ಬೆಳಗಿನ ಜಾವ 3.30ಗಂಟೆಗೆ ಸ್ಯಾಂಡಲ್‌ವುಡ್ ಚಾಲೆಜಿಂಗ್ ಸ್ಟಾರ್ ದರ್ಶನ್‌ ಹಾಗೂ ನಟ ಪ್ರಜ್ವಲ್ ದೇವರಾಜ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡ ಪರಿಣಾಮ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ಕಾರು ಚಾಲನೆ ಮಾಡುತ್ತಿದ್ದ ರಾಯ್‌ ಆಂಟೋನಿ ಅವರಿಗೆ ಗಾಯಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಇದೇ ವೇಳೆ ದೇವರಾಜ್, ಪ್ರಜ್ವಲ್ ದೇವರಾಜ್ ಅವರು ವೈದ್ಯರ ಅನುಮತಿ ಮೇರೆಗೆ ಅಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ ದರ್ಶನ್ ಹಾಗೂ ರಾಯ್‌ ಆಂಟೋನಿ ಇನ್ನೇರಡು ದಿವಸಗಳ ಕಾಲ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಅಂತ ತಿಳಿದು ಬರುತ್ತಿದೆ. ಆಸ್ಪತ್ರೆಯಿಂದ ಹೊರ ಬಂದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ದೇವರಾಜ್, ಪ್ರಜ್ವಲ್ ದೇವರಾಜ್ ಅವರು ಯಾರಿಗೂ ಏನು ತೊಂ ದರೆಯಾಗಿಲ್ಲ, ದೇವರ ದಯೆಯಿಂದ ಎಲ್ಲರೂ ಚೆನ್ನಾಗಿ ಇದ್ದೇವೆ ಅಂತ ಹೇಳಿದರು.

Facebook Comments

Sri Raghav

Admin