ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ದೇವರಾಜ್ ಮತ್ತು ಪ್ರಜ್ವಲ್ ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

Darshan-Accident

ಮೈಸೂರು, ಸೆ.25- ಕಾರು ಅಪಘಾತಕ್ಕೀಡಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಅವರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಆದರೆ ಬಹತೇಕ ಚೇತರಿಸಿಕೊಂಡಿರುವ ನಟರಾದ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಅವರು ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

ದರ್ಶನ್ ಅವರ ಕೈಗೆ ಶಸ್ತ್ರಚಿಕಿತ್ಸೆ ನಡೆಸಿರುವುದರಿಂದ ಇನ್ನು ಒಂದೆರಡು ದಿನಗ ಆಸ್ಪತ್ರೆಯಲ್ಲೇ ಇರಬೇಕಾಗುತ್ತದೆ. ಅವರ ಆರೋಗ್ಯ ಪರಿಸ್ಥಿತಿ ನೋಡಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ಕೂಡ ಆಸ್ಪತ್ರೆಯ ಮುಂಭಾಗ ನೂರಾರು ಅಭಿಮಾನಿಗಳು ಜಮಾಯಿಸಿ, ತಮ್ಮ ನೆಚ್ಚಿನ ನಟನನ್ನು ನೋಡಲು ಅವಕಾಶ ನೀಡುವಂತೆ ಒತ್ತಾಯಿಸಿದರು. ಆದರೆ ಭದ್ರತಾ ದೃಷ್ಟಿಯಿಂದ ಯಾರನ್ನೂ ಪೊಲೀಸರು ಒಳಗೆ ಬಿಡಲಿಲ್ಲ. ಪೌರ ಕಾರ್ಮಿಕರ ನಿಯೋಗವೊಂದು ದರ್ಶನ್ ಭೇಟಿಗೆ ಇಂದು ಆಸ್ಪತ್ರೆಗೆ ಆಗಮಿಸಿತ್ತು. ಆದರೆ ಅವರಿಗೂ ಭೇಟಿಯ ಅವಕಾಶ ಸಿಗಲಿಲ್ಲ.

ಆಸ್ಪತ್ರೆಯ ಇತರ ವಾರ್ಡ್‍ಗಳಲ್ಲಿರುವ ರೋಗಿಗಳು ಮತ್ತು ಅವರ ಕುಟುಂಬದವರು ದರ್ಶನ್ ದಾಖಲಾಗಿರುವ ಕೊಠಡಿ ಕಡೆ ಹೋಗದಂತೆ ಸೂಚಿಸಲಾಗಿದೆ. ದರ್ಶನ್ ಕೊಠಡಿಗೆ ಹೋಗುವ ಸಿಬ್ಬಂದಿಗೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಆಸ್ಪತ್ರೆಯ ಸಿಬ್ಬಂದಿ ದರ್ಶನ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುತ್ತಿದ್ದ ಹಿನ್ನೆಲೆಯಲ್ಲಿ ದರ್ಶನ್ ಮನವಿಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಆಸ್ಪತ್ರೆಯ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾರನ್ನೂ ಕೂಡ ಒಳಗೆ ಬಿಡಲಾಗುತ್ತಿಲ್ಲ.

ದೇವರಾಜ್, ಪ್ರಜ್ವಲ್ ದೇವರಾಜ್ ಹೇಳಿದ್ದೇನು..?
ದೇವರಾಜ್, ಪ್ರಜ್ವಲ್ ದೇವರಾಜ್ ಅವರು ವೈದ್ಯರ ಅನುಮತಿ ಮೇರೆಗೆ ಅಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ ದರ್ಶನ್ ಹಾಗೂ ರಾಯ್‌ ಆಂಟೋನಿ ಇನ್ನೇರಡು ದಿವಸಗಳ ಕಾಲ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಅಂತ ತಿಳಿದು ಬರುತ್ತಿದೆ. ಆಸ್ಪತ್ರೆಯಿಂದ ಹೊರ ಬಂದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ದೇವರಾಜ್, ಪ್ರಜ್ವಲ್ ದೇವರಾಜ್ ಅವರು ಯಾರಿಗೂ ಏನು ತೊಂದರೆಯಾಗಿಲ್ಲ, ದೇವರ ದಯೆಯಿಂದ ಎಲ್ಲರೂ ಚೆನ್ನಾಗಿ ಇದ್ದೇವೆ ಅಂತ ಹೇಳಿದರು.

Facebook Comments

Sri Raghav

Admin