ಮತ್ತೆ ಟೀಮ್ ಇಂಡಿಯಾದ ಕ್ಯಾಪ್ಟನ್ ಆದ ಧೋನಿ

ಈ ಸುದ್ದಿಯನ್ನು ಶೇರ್ ಮಾಡಿ

Dhoni--01

ದುಬೈ,ಸೆ.25- ಟೆಸ್ಟ್ ಜೀವನಕ್ಕೆ ನಿವೃತ್ತಿ ಘೋಷಿಸಿದ ನಂತರ ಸೀಮಿತ ಓವರ್‍ಗಳ ಪಂದ್ಯಗಳ ನಾಯಕತ್ವಕ್ಕೂ ಗುಡ್ ಬೈ ಹೇಳಿದ ಮಹೇಂದ್ರ ಸಿಂಗ್ ಧೋನಿಗೆ ಮತ್ತೆ ನಾಯಕನಾಗುವ ಅದೃಷ್ಟ ಒಲಿದು ಬಂದಿದೆ. ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿಯಲ್ಲಿರುವುದರಿಂದ ಏಷ್ಯ ಕಪ್‍ಗೆ ಹಂಗಾಮಿ ನಾಯಕನಾಗಿ ಆಯ್ಕೆಯಾಗಿದ್ದ ರೋಹಿತ್ ಶರ್ಮ ಆಫ್ಘಾನಿಸ್ತಾನ ವಿರುದ್ಧ ಪಂದ್ಯಕ್ಕೆ ಧೋನಿಗೆ ಈ ಅದೃಷ್ಟ ಒಲಿದಿದೆ.

696 ದಿನಗಳ ನಂತರ ನಾಯಕನಾಗಿರುವ ಮಹೇಂದ್ರ ಸಿಂಗ್ ಧೋನಿ. ನಾಯಕನಾಗಿ 200 ನೇ ಪಂದ್ಯವನ್ನು ಮುನ್ನಡೆಸಲಿದ್ದಾರೆ. ಇದು ಧೋನಿ ಅಭಿಮಾನಿಗಳಲ್ಲಿ ಸಂತಸ ತಂದಿದೆ.

ಈಗಾಗಲೇ ಏಷ್ಯ ಕಪ್‍ನ ಫೈನಲ್‍ಗೇರಿರುವ ಭಾರತ ತಂಡವು ಇಂದು ಹಲವು ಬದಲಾವಣೆಗಳನ್ನುಮಾಡಿಕೊಂಡಿದೆ. ಭುವನೇಶ್ವರ್ ಕುಮಾರ್, ಗುಂಬ್ರಾ, ಶಿಖರ್ ಧವನ್, ರೋಹಿತ್ ಶರ್ಮಗೆ ವಿಶ್ರಾಂತಿ ನೀಡಿದ್ದು, ದೀಪಕ್ ಚಹರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ. ಕನ್ನಡಿಗರಾದ ಕೆ.ಎಲ್.ರಾಹುಲ್ ಮತ್ತು ಮನೀಶ್ ಪಾಂಡೆಗೂ ತಂಡದಲ್ಲಿ ಸ್ಥಾನ ದೊರೆತಿದೆ.

ಟೀಂ ಇಂಡಿಯಾ ನಾಯಕತ್ವ ತ್ಯಜಿಸಿದ್ದ ಎಂ.ಎಸ್ ಧೋನಿ ಇದೀಗ ಮತ್ತೆ ಭಾರತ ತಂಡವನ್ನ ಮುನ್ನಡೆಸುತ್ತಿದ್ದಾರೆ. ಆದರೆ ನಾಯಕನಾಗಿ ಕಮ್‌ಬ್ಯಾಕ್ ಪಂದ್ಯದಲ್ಲಿ ಧೋನಿ ಟಾಸ್ ಸೋತರು. ಹೀಗಾಗಿ ಅಫ್ಘಾನಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ಎಂ.ಎಸ್ ಧೋನಿ ನಾಯಕನ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಅಫ್ಘಾನಿಸ್ತಾನ ವಿರುದ್ಧದ ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯದಲ್ಲಿ  ರೋಹಿತ್ ಬದಲಿಗೆ ಟಾಸ್ ಗೆ  ಎಂಟ್ರಿ ಕೊಟ್ಟು ಅಚ್ಚರಿ ಮೂಡಿಸಿದರು.  ಆದರೆ ಟಾಸ್ ಸೋತಿದ್ದಾರೆ.  ಈ ಮೂಲಕ ಟಾಸ್ ಗೆದ್ದ ಅಫ್ಘಾನಿಸ್ತಾನ ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

Facebook Comments

Sri Raghav

Admin