ಮೈತ್ರಿಯೊಳಗೆ ಅಸಮಾಧಾನ, ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ತಾತ್ಕಾಲಿಕ ಬ್ರೇಕ್

ಈ ಸುದ್ದಿಯನ್ನು ಶೇರ್ ಮಾಡಿ

IAS-IPS-IFS
ಬೆಂಗಳೂರು. ಸೆ.25 : ಪೊಲೀಸ್ ಅಧಿಕಾರಿಗಳ ವರ್ಗಾವಣೆ ವಿಚಾರ ಸಂಬಂಧ ಮೈತ್ರಿ ಸರ್ಕಾರದ ಪಾಲುದಾರ ಪಕ್ಷ ಕಾಂಗ್ರೆಸ್ನ ಶಾಸಕರಿಂದ ಅಸಮಾಧಾನ ವ್ಯಕ್ತವಾಗುತ್ತಿದ್ದಂತೆ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.ಮಿತ್ರಪಕ್ಷ ಕಾಂಗ್ರೆಸ್ ಶಾಸಕರ ಅಸಮಾಧಾನದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸಿಎಂ ಕುಮಾರಸ್ವಾಮಿ ಇನ್ಸ್ಪೆಕ್ಟರ್ಗಳ ವರ್ಗಾವಣೆಗೆ ತಡೆ ನೀಡಿದ್ದಾರೆ. ಸೋಮವಾರ ಮಾಡಲಾಗಿದ್ದ ಇನ್ಸ್ಪೆಕ್ಟರ್ಗಳ ವರ್ಗಾವಣೆಗೆ ಸಿಎಂ ಸೂಚನೆ ನೀಡಿದ ಕಾರಣ ವರ್ಗಾವಣೆ ಪಟ್ಟಿಗೆ ಬ್ರೇಕ್ ಹಾಕಲಾಗಿದೆ.

141 ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಿ ನಿನ್ನೆ ಆದೇಶ ಹೊರಡಿಸಲಾಗಿತ್ತು. ಸಿಎಂ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಶಾಸಕರು, ತಾವು ಶಿಫಾರಸು ಮಾಡಿದ್ದ ಪತ್ರಕ್ಕೆ ಸಿಎಂ ಕುಮಾರಸ್ವಾಮಿ ಮಾನ್ಯತೆ ನೀಡಿಲ್ಲವೆಂದು ಅಸಮಾಧಾನ ಹೊರಹಾಕಿದ್ದರು. ಕಾಂಗ್ರೆಸ್ ಶಾಸಕರನ್ನು ಕಡೆಗಣಿಸುತ್ತಿದ್ದಾರೆ ಎಂದು ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ವರ್ಗಾವಣೆ ಪಟ್ಟಿ ಕೈಬಿಡುವಂತೆ ಕಾಂಗ್ರೆಸ್ ಶಾಸಕರು ಮಾಡಿದ್ದ ಒತ್ತಾಯಕ್ಕೆ ಸಿಎಂ ಮಣಿದಿದ್ದಾರೆ. ವರ್ಗಾವಣೆಗೊಂಡಿರುವ ಯಾವುದೇ ಇನ್ಸ್ ಪೆಕ್ಟರ್ಗಳು ರಿಲೀವ್ ಆಗದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಿಂದ ವೈರ್ ಲೇಸ್ ಸಂದೇಶ ರವಾನೆಗೆ ಆದೇಶಿಸಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು‌ ಖಚಿತಪಡಿಸಿವೆ.

# ಯಾಕೆ ವರ್ಗಾವಣೆಗೆ ಬ್ರೇಕ್..?
ಇನ್ಸ್ಪೆಕ್ಟರ್ಗಳ ವರ್ಗಾವಣೆಗೆ ಕಾಂಗ್ರೆಸ್ನ ಕೆಲ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. ತಾವು ಶಿಫಾರಸು ಮಾಡಿದ್ದ ಪತ್ರಕ್ಕೆ ಸಿಎಂ ಕುಮಾರಸ್ವಾಮಿ ಮಾನ್ಯತೆ ನೀಡಿಲ್ಲ. ನಮ್ಮನ್ನ ಕಡೆಗಣಿಸಿ ಪೊಲೀಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ ಅಂತಾ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಮಿತ್ರ ಪಕ್ಷಗಳ ಅಸಮಾಧಾನದ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಇನ್ಸ್ಪೆಕ್ಟರ್ಗಳ ವರ್ಗಾವಣೆ ಆದೇಶಕ್ಕೆ ಬ್ರೇಕ್ ಹಾಕಿದ್ದಾರೆ ಎನ್ನಲಾಗುತ್ತಿದೆ.

# ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ವಾ..?
ಸಿಎಂ ಕುಮಾರಸ್ವಾಮಿ ಮಾಡುತ್ತಿರುವ ಈ ರೀತಿಯ ಸರ್ಕಸ್ಗಳನ್ನ ನೋಡಿದ್ರೆ ಮೋಲ್ನೋಟಕ್ಕೆ ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಅನ್ನೋದು ಗೊತ್ತಾಗುತ್ತಿದೆ. ಹೇಗಾದರೂ ಮಾಡಿ ಐದು ವರ್ಷ ಸರ್ಕಾರವನ್ನು ನಡೆಸಲೇಬೇಕು ಅಂತಾ ಪಣ ತೊಟ್ಟಿರುವ ಸಿಎಂ ಕುಮಾರಸ್ವಾಮಿ, ಮಿತ್ರ ಪಕ್ಷದ ನಾಯಕರ ಒತ್ತಡಕ್ಕೆ ಮತ್ತೆ ಮಣಿದಿದ್ದಾರೆ. ಈ ಮೂಲಕ ಸಮ್ಮಿಶ್ರ ಸರ್ಕಾರದಲ್ಲಿ ಮತ್ತೆ ಮುಸುಕಿನ ಗುದ್ದಾಟ ಮುಂದುವರಿದಿದೆ ಅನ್ನೋದು ಸಾಬೀತಾಗಿದೆ.

Facebook Comments

Sri Raghav

Admin