ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ಕುರಿತು ಸಿಎಂ ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

kumaraswamy
ಬೆಂಗಳೂರು, ಸೆ.26-ಹೊಸ ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವ ಕುರಿತು ಇದುವರೆಗೂ ಯಾವುದೇ ತೀರ್ಮಾನ ಆಗಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಈ ವಿಚಾರವನ್ನು ಗಮನಿಸಿದ್ದೇನೆ. ಅಬಕಾರಿ ಇಲಾಖೆ ನನ್ನ ಬಳಿಯೇ ಇದೆ. ಆದರೆ ಈವರೆಗೆ ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ಕುರಿತು ತೀರ್ಮಾನ ಆಗಿಲ್ಲ ಎಂದರು.

ಬಸ್ ದರ ಏರಿಕೆ ಪ್ರಸ್ತಾವನೆಗೆ ನಾನೇ ತಡೆ ನೀಡಿದ್ದೇನೆ. ಜನಸಾಮಾನ್ಯರಿಗೆ ಹೊರೆಯಾಗದಂತೆ ತೀರ್ಮಾನ ತೆಗೆದುಕೊಳ್ಳುತ್ತೇನೆ. ಆ ಬಗ್ಗೆ ಇಲಾಖೆ ಜೊತೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.
ಎಸ್ಸಿ-ಎಸ್ಟಿ ಬಡ್ತಿ ಮೀಸಲಾತಿ ಸಂಬಂಧ ಸುಪ್ರೀಂ ಆದೇಶದ ಕುರಿತು ಮಾತನಾಡಿದ ಅವರು, ಈ ಬಗ್ಗೆ ಅಡ್ವೊಕೇಟ್ ಜನರಲ್ ಅವರೊಂದಿಗೆ ಚರ್ಚಿಸುತ್ತೇನೆ. ಆದೇಶದ ಪ್ರತಿ ಪಡೆದ ನಂತರ ಸಂಬಂಧಿಸಿದವರ ಬಳಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ನಂತರ ಆಧಾರ್ ಕಾರ್ಡ್ ಕುರಿತು ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲದಕ್ಕೂ ಆಧಾರ್ ಕಾರ್ಡ್ ಕಡ್ಡಾಯ ಎಂಬ ನಿಯಮ ಸಡಿಲಿಕೆಯಾಗಿದ್ದು, ಈ ಬಗ್ಗೆಯೂ ತೀರ್ಪಿನ ಸಂಪೂರ್ಣ ಸಾರಾಂಶ ಪಡೆದು ನಂತರ ಪ್ರತಿಕ್ರಿಯಿಸುವುದಾಗಿ ತಿಳಿಸಿದರು.

Facebook Comments

Sri Raghav

Admin