BREAKING : ಜಾಮೀನು ನಿರಾಕರಿಸಿದ ಕೋರ್ಟ್, ‘ಕರಿಚಿರತೆ’ಗೆ ಬೋನೆ ಗತಿ..!

ಈ ಸುದ್ದಿಯನ್ನು ಶೇರ್ ಮಾಡಿ

Jail-Duniy-vijay--01

ಬೆಂಗಳೂರು. ಸೆ.26 : ಮಾರುತಿ ಗೌಡ ಅಪಹರಣ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಿ ಹಾಗೂ ಸಹಚರರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು 8ನೇ ಎಸಿಎಂಎಂ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ಇದರಿಂದ ದುನಿಯಾ ವಿಜಿ ಹಾಗೂ ಆಪ್ತರಿಗೆ ಸದ್ಯ ಜೈಲೇ ಗತಿಯಾಗಿದೆ. ನ್ಯಾಯಮೂರ್ತಿ ಮಹೇಶ್ ಬಾಬು ಅವರಿದ್ದ ಏಕಸದಸ್ಯ ಪೀಠ ಪ್ರಕರಣದ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಹೈಕೋರ್ಟ್’ಗೆ ಮೇಲ್ಮನವಿ ಸಲ್ಲಿಸಿದರೆ ಮಾತ್ರ ದುನಿಯಾ ವಿಜಯ್ ಜಾಮೀನು ಅರ್ಜಿಯ ಹಣೆಬರಹ ನಿರ್ಧಾರವಾಗಲಿದೆ. ಅಲ್ಲಿಯವರೆಗೂ ಪರಪ್ಪನ ಅಗ್ರಹಾರವೇ ಅವರ ‘ದುನಿಯಾ’ ಆಗಿರಲಿದೆ.

ಹಲ್ಲೆ ಮತ್ತು ಅಪಹರಣ ಪ್ರಕರಣದಲ್ಲಿ ನಟ ದುನಿಯಾ ವಿಜಯ್ ಆರೋಪಿಯಾಗಿದ್ದು, ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದುನಿಯಾ ವಿಜಯ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. . ದುನಿಯಾ ವಿಜಯ್ ಪರ ವಕೀಲರು ಸೋಮವಾರ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ವಾದ, ಪ್ರತಿವಾದ ಆಲಿಸಿದ ನಂತರ ನ್ಯಾಯಾಧೀಶರು ಜಾಮೀನು ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು. ಪ್ರಕರಣ ಸಂಬಂಧ ವಿಜಯ್, ಪ್ರಸಾದ್, ಮಣಿ, ಕಾರು ಚಾಲಕ ಪ್ರಸಾದ್ ಸೇರಿದಂತೆ ನಾಲ್ವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು.

ಶನಿವಾರ ತಡರಾತ್ರಿ ಅಂಬೇಡ್ಕರ್ ಭವನದಲ್ಲಿ ನಡೆದ ಬಾಡಿ ಬಿಲ್ಡಿಂಗ್ ಸ್ಪರ್ಧೆ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾರುತಿ ಗೌಡನ ಜತೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿತ್ತು. ಈ ವೇಳೆ ನಟ ವಿಜಯ್, ಅವರ ಸ್ನೇಹಿತರಾದ ಪ್ರಸಾದ್, ಮಣಿ ಎಂಬವರು ಸೇರಿ ಮಾರುತಿ ಗೌಡನನ್ನು ಅಪಹರಿಸಿ ಕಾರಿನಲ್ಲಿ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

Facebook Comments

Sri Raghav

Admin