ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಜನ್ಮದಿನ, ಗಣ್ಯರ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

Manmohan-singh

ನವದೆಹಲಿ, ಸೆ.26 (ಪಿಟಿಐ)- ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರಿಗೆ ಇಂದು 87ನೇ ಜನ್ಮದಿನದ ಸಂಭ್ರಮ. ಭಾರತದ ಖ್ಯಾತ ಅರ್ಥ ಶಾಸ್ತ್ರಜ್ಞರೂ ಆದ ಡಾ. ಸಿಂಗ್ ಅವರಿಗೆ ಪ್ರಧಾನಿ ನರೇಂದ್ರಮೋದಿ ಯುಪಿಎ ಅಧ್ಯಕ್ಷ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಜನ್ಮದಿನದ ಶುಭಾಶಯ ಸಲ್ಲಿಸಿದ್ದಾರೆ. ದೇಶ ನಿರ್ಮಾಣಕ್ಕಾಗಿ ಅವರು ಸಲ್ಲಿಸಿದ ನಿಸ್ವಾರ್ಥ ಸೇವೆಯಲ್ಲಿ ಗಣ್ಯರು ಗುಣಗಾನ ಮಾಡಿದ್ದಾರೆ.

ಈಗ ಪಾಕಿಸ್ತಾನದಲ್ಲಿರುವ ಗಾಗ್ ಪ್ರಾಂತ್ಯದಲ್ಲಿ ಸೆಪ್ಟೆಂಬರ್ 26, 1932ರಂದು ಜನಿಸಿದೆ ಮನಮೋಹನ್ ಸಿಂಗ್ ಭಾರತೀಯ ರಿಸರ್ವ್ ಬ್ಯಾಂಕ್ ಗೌರ್ನರ್ ಮತ್ತು ಕೇಂದ್ರ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. 2004 ರಿಂದ 2014ರವರೆಗೆ ಅವರು ಪ್ರಧಾನಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

Facebook Comments

Sri Raghav

Admin