ರಾಮನಗರದಲ್ಲಿ ಬೋನಿಗೆ ಬಿದ್ದ ಚಿರತೆ

ಈ ಸುದ್ದಿಯನ್ನು ಶೇರ್ ಮಾಡಿ

Chirate--01
ರಾಮನಗರ, ಅ.8- ಗ್ರಾಮ ಸ್ಥರಿಗೆ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿದೆ. ತಾಲ್ಲೂಕಿನ ಅರೇಹಳ್ಳಿ ಗ್ರಾಮದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿತ್ತು. ರಾತ್ರಿ ವೇಳೆ ಗ್ರಾಮಕ್ಕೆ ಬಂದು ಮೇಕೆ, ಕುರಿಗಳನ್ನು ಹೊತ್ತೊಯ್ಯುತ್ತಿತ್ತು. ಇತ್ತೀಚೆಗೆ ಮರಿಚಿಕ್ಕೇಗೌಡ ಎಂಬುವರ ಎರಡು ಕುರಿಗಳನ್ನು ಚಿರತೆ ಕೊಂದು ಹಾಕಿತ್ತು.

ಹೀಗಾಗಿ ಉಪಟಳ ನೀಡುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು. ಮನವಿ ಮೇರೆಗೆ ಅರಣ್ಯಾಧಿಕಾರಿಗಳು ಅರೇಹಳ್ಳಿ ಗ್ರಾಮದ ಕಾಡಿನಲ್ಲಿ ಬೋನು ಇಟ್ಟಿದ್ದರು.  ನಿನ್ನೆ ರಾತ್ರಿ ಮೂರು ವರ್ಷದ ಗಂಡು ಚಿರತೆಯೊಂದು ಬೋನಿಗೆ ಬಿದ್ದಿದ್ದು , ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಕೊಂಡೊಯ್ದಿದ್ದಾರೆ. ಈ ಹಿಂದೆಯೂ ಇದೇ ಪ್ರದೇಶದಲ್ಲಿ ಮೂರು ಚಿರತೆಗಳನ್ನು ಸೆರೆ ಹಿಡಿಯಲಾಗಿತ್ತು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin