ಸಿಡಿಲು ಬಡಿದು ತಾಯಿ-ಮಗಳು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Thunderbolt
ದಾವಣಗೆರೆ ಅ.15- ಸಿಡಿಲು ಬಡಿದು ತಾಯಿ, ಮಗಳು ಸಾವನ್ನಪ್ಪಿರುವ ದುರಂತ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ತಾಯಿ ಕವಿತಾ ಬಾಯಿ (29) ಮಗಳು ಪಲ್ಲವಿ (11) ಮೃತಪಟ್ಟ ದುರ್ದೈವಿಗಳು. ಚನ್ನಳ್ಳಿ ತಾಂಡದ ಪಕ್ಕದಲ್ಲೇ ಇದ್ದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ . ಹರಪ್ಪನಹಳ್ಳಿ ಠಾಣಾ ಪೊಲೀಸರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )