ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶ ಕುರಿತು ಸಿಎಂ ಕುಮಾರಸ್ವಾಮಿ ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01

ಮೈಸೂರು, ಅ.17-ಕೇರಳದ ಶಬರಿ ಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಅಲ್ಲಿನ ಸರ್ಕಾರ ಮತ್ತು ವಿರೋಧ ಪಕ್ಷಗಳು ಮಾತುಕತೆ ಮೂಲಕ ಸೂಕ್ತ ರೀತಿಯ ಕ್ರಮಕೈಗೊಳ್ಳುವುದು ಅಗತ್ಯ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಅಯ್ಯಪ್ಪ ಸ್ವಾಮಿ ದರ್ಶನ ಮಾಡಲು ಮಹಿಳೆಯರಿಗೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಅಲ್ಲಿ ಬಿಕ್ಕಟ್ಟು ನಿರ್ಮಾಣವಾಗಿದೆ. ಅದರ ಬಗ್ಗೆ ಸರ್ಕಾರ ಮತ್ತು ವಿರೋಧ ಪಕ್ಷಗಳು ಮಾತುಕತೆ ನಡೆಸಿ ಸರಿಯಾದ ರೀತಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಸಲಹೆ ಮಾಡಿದ್ದಾರೆ.  ಶಬರಿ ಮಲೆ ವಿಚಾರವನ್ನು ಕೆಲವರು ರಾಜಕೀಯ ವಿಚಾರಕ್ಕಾಗಿ ದುರ್ಬಳಕೆ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ದೇಶದಲ್ಲಿ ಸಂಸ್ಕøತಿ, ಕೆಲವು ಆಚಾರ ವಿಚಾರಗಳು ಬಹಳ ಹಿಂದಿನಿಂದಲೂ ನಡೆದು ಬಂದಿವೆ.

ಪೂರ್ವಿಕರು ಯಾವ ಕಾರಣಕ್ಕಾಗಿ ಅಂತಹ ಧಾರ್ಮಿಕ ಆಚರಣೆಗಳನ್ನು ತಂದಿದ್ದಾರೆ ಎಂಬುದನ್ನು ಮನಗಾಣಬೇಕು. ಯಾವುದೇ ರೀತಿಯ ಶಕ್ತಿ ಇರಲಿ, ಅದರ ಬಗ್ಗೆ ದುಡುಕಬಾರದು. ಪ್ರಕೃತಿ ಮೇಲೆ ಅನಾಹುತ ಉಂಟಾಗದಂತೆ ತೀರ್ಮಾನಗಳಾಗಬೇಕು. ಮಹಿಳೆಯ ಪ್ರವೇಶಕ್ಕೆ ಸಂಬಂಧಿಸಿದಂತೆ ಕೆಲವರು ಒಂದೊಂದು ರೀತಿಯಲ್ಲಿ ವಿಶ್ಲೇಷಣೆ ಮಾಡಿದ್ದಾರೆ. ಕೆಲವರು ಮೂಢನಂಬಿಕೆ ಎಂದು ಕೂಡ ಕರೆದಿದ್ದಾರೆ. ಈ ವಿಚಾರದಲ್ಲಿ ಮಾತುಕತೆ ಮೂಲಕ ಸರಿಯಾದ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂದರು.

ಕೊಡಗಿನಲ್ಲಿ ಅತಿಯಾದ ಮಳೆಯಿಂದ ಉಂಟಾದ ಸಮಸ್ಯೆಗಳ ಬಗ್ಗೆ ಅಲ್ಲಿನ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ ಯಾವ ಯಾವ ರೀತಿಯ ನೆರವು ನೀಡಬೇಕೆಂಬ ಮಾಹಿತಿಯನ್ನು ಪಡೆದು ಸರ್ಕಾರ ಅಗತ್ಯ ಕ್ರಮಕೈಗೊಳ್ಳಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

Facebook Comments