ಅಸ್ಸಾಂ ಬಂದ್‍ಗೆ ಭಾರೀ ಬೆಂಬಲ, ರೈಲು ಸಂಚಾರಕ್ಕೆ ತಡೆ

ಈ ಸುದ್ದಿಯನ್ನು ಶೇರ್ ಮಾಡಿ

Assam-Bandhj
ಗುವಾಹತಿ, ಅ.23-ಪೌರತ್ವ ಮಸೂದೆ ವಿರುದ್ಧ ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಇಂದು ನಡೆಯುತ್ತಿರುವ 12 ತಾಸುಗಳ ಬಂದ್‍ಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಸಣ್ಣಪಟ್ಟು ಅಹಿತಕರ ಘಟನೆಗಳನ್ನು ಹೊರತುಪಡಿಸಿದಂತೆ ರಾಜ್ಯ ಬಂದ್ ಬಹುತೇಕ ಶಾಂತಿಯುತವಾಗಿತ್ತು.

46 ಸಂಘಟನೆಗಳು ಇಂದು ಅಸ್ಸಾಂ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜಧಾನಿ ಗುವಾಹತಿ ಸೇರಿದಂತೆ ರಾಜ್ಯದಾದ್ಯಂತ ಭಾರೀ ಬಂದೋಬಸ್ತ್ ಮಾಡಲಾಗಿತ್ತು. ಕೆಲವೆಡೆ ಪ್ರತಿಭಟನಾಕಾರರು ಧರಣಿ ನಡೆಸಿ ರೈಲು ಸಂಚಾರಕ್ಕೆ ಅಡ್ಡಿ ಉಂಟು ಮಾಡಿದರು. ಹಲವೆಡೆ ಟೈರ್‍ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ.

ರೈಲ್ವೆ ಹಳಿಗಳ ಮೇಲೆ ಕುಳಿತು ರೈಲುಗಳ ಸಂಚಾರಕ್ಕೆ ಅಡ್ಡಿಪಡಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸಿದರು. ಬಂದ್ ವೇಳೆ ಸಾರ್ವಜನಿಕ ವಾಹನಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಕೆಲವೆಡೆ ವಾಹನಗಳ ಸಂಚಾರ ಕಡಿಮೆ ಇತ್ತು.

Facebook Comments