ಮಗುಚಿ ಬಿದ್ದ ಫಾರ್ಚೂನ್ ಕಾರು, ಮೂವರಿಗೆ ಗಂಭೀರ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

carತುಮಕೂರು, ನ.4- ಚಾಲಕನ ನಿಯಂತ್ರಣ ತಪ್ಪಿ ಫಾರ್ಚೂನ್ ಕಾರೊಂದು ರಸ್ತೆಯಲ್ಲೇ ಮಗುಚಿ ಬಿದ್ದು ಅದರಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಶಿವಮೊಗ್ಗದ ಆದರ್ಶ್ (24), ರಾಜಸ್ತಾನದ ಮೂಲದ ಸುಮಿತ್ ಕುಮಾರ್ ಹಾಗೂ ಚಾಲಕ ಇಮ್ರಾನ್ (35) ಗಾಯಗೊಂಡವರು. ಬೆಂಗಳೂರಿನಿಂದ ದಾವಣಗೆರೆಗೆ ಬರುತ್ತಿದ್ದ ಕಾರು ಇಂದು ಬೆಳಗ್ಗೆ 7.30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 48ರ ಶಿರಾ ಬೈಪಾಸ್‍ನ ಬುಕ್ಕಾಪಟ್ಣ ದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ತಕ್ಷಣ ಸ್ಥಳೀಯರು ಕಾರಿನೊಳಗೆ ಸಿಲುಕಿಕೊಂಡಿದ್ದ ಮೂವರನ್ನು ಹೊರಗೆ ತೆಗೆದು ಶಿರಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಶಿರಾ ಠಾಣೆಯ ಇನ್ಸ್‍ಪೆಕ್ಟರ್ ರಂಗಸ್ವಾಮಿ, ಸಬ್ ಇನ್ಸ್‍ಪೆಕ್ಟರ್ ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿರಾ ಆಸ್ಪತ್ರೆಯಿಂದ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಶಿರಾ ಪೊಲೀಸರು ತಿಳಿಸಿದ್ದಾರೆ.

Facebook Comments