ಚಿಕ್ಕಮಗಳೂರು ಬಸ್‍ನಿಲ್ದಾಣದಲ್ಲಿ ಮಚ್ಚು ಹಿಡಿದು ಬಂದು ಆತಂಕ ಸೃಷ್ಟಿಸಿದ ಮಹಿಳೆ..!

ಈ ಸುದ್ದಿಯನ್ನು ಶೇರ್ ಮಾಡಿ

Women--01

ಚಿಕ್ಕಮಗಳೂರು, ನ.5-ಮಾನಸಿಕ ಅಸ್ವಸ್ಥೆ ಮಹಿಳೆಯೊಬ್ಬಳು ಬಸ್‍ನಿಲ್ದಾಣದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದುದನ್ನು ಕಂಡ ಸ್ಥಳೀಯರು ಕೆಲಕಾಲ ಆತಂಕಕ್ಕೀಡಾದರು. ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ವಿವರ: ಈಕೆ ಮೂಡಿಗೆರೆ ತಾಲೂಕಿನವರಾಗಿದ್ದು, ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ.  ಮೂಡಿಗೆರೆಯಿಂದ ಚಿಕ್ಕಮಗಳೂರಿಗೆ ಬಸ್‍ನಲ್ಲಿ ಬಂದು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಇಳಿದು ಅಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುತ್ತಿದ್ದಳು. ಆಕೆಯನ್ನು ಹಿಡಿಯಲು ಹೋದರೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಳು.

ಬಸ್ ನಿಲ್ದಾಣದಲ್ಲಿ ಹಾಕಲಾಗಿರುವ ಬ್ಯಾನರ್‍ಗಳನ್ನು ಮಚ್ಚಿನಿಂದ ಹರಿದು ಹಾಕಿದ್ದಾಳೆ ಹಾಗೂ ಒಂದು ಕೆಎಸ್‍ಆರ್‍ಟಿಸಿ ಬಸ್‍ನ ಗಾಜನ್ನು ಸಹ ಹೊಡೆದು ಹಾಕಿದ್ದಾಳೆ. ಇದರಿಂದ ಕೆಲ ಕಾಲ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿತ್ತು.  ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ನಗರ ಠಾಣೆ ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

Facebook Comments