ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

water

ಶೃಂಗೇರಿ, ನ.5- ಶಾಲೆಯ ಸಹಪಾಠಿಗಳೊಂದಿಗೆ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ರಾಮನಗರ ಜಿಲ್ಲೆ, ಕನಕಪುರ ತಾಲೂಕಿನ ಸಾತನೂರು ಗ್ರಾಮದ ತರುಣ್‍ಗೌಡ (15) ಮೃತಪಟ್ಟ ವಿದ್ಯಾರ್ಥಿ.ಸಾತನೂರಿನ ಪ್ರಿಯದರ್ಶಿನಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಶಿಕ್ಷಕರು ಹಾಗೂ ಸಹಪಾಠಿಗಳೊಂದಿಗೆ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದನು. ಸ್ನಾನ ಮಾಡಲು ಈತ ತುಂಗಾನದಿಗೆ ಇಳಿದಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.ಈ ಬಗ್ಗೆ ಶೃಂಗೇರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments