ಹಾಡಹಗಲೇ ಬಿಬಿಎಂಪಿ ಸದಸ್ಯನ ಮೇಲೆ ಹಲ್ಲೆ

ಈ ಸುದ್ದಿಯನ್ನು ಶೇರ್ ಮಾಡಿ

bbmpಬೆಂಗಳೂರು, ನ.7- ಮನೆಯಿಂದ ಹೊರಬರುತ್ತಿದ್ದ ನಾಮನಿರ್ದೇಶಿತ ಬಿಬಿಎಂಪಿ ಸದಸ್ಯರೊಬ್ಬರ ಮೇಲೆ ಐದಾರು ಮಂದಿಯಿದ್ದ ಗುಂಪು ಚಾಕುವಿನಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವ ಬಿಬಿಎಂಪಿ ನಾಮನಿರ್ದೇಶಿತ ಸದಸ್ಯ ವಿಲಯಮ್ಸ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಲಯಮ್ಸ್ ಅವರು ನಿನ್ನೆ ರಾತ್ರಿ ಮನೆಯಿಂದ ಹೊರಬರುವುದನ್ನೇ ಕಾಯುತ್ತಿದ್ದ ದುಷ್ಕರ್ಮಿಗಳ ಗುಂಪು ಚಾಕುವಿನಿಂದ ಮುಖ, ಕುತ್ತಿಗೆ ಮೇಲೆ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಸ್ಥಳೀಯರು ಬಿಬಿಎಂಪಿ ಸದಸ್ಯರ ನೆರವಿಗೆ ಬಂದ ತಕ್ಷಣ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡಿದ್ದ ವಿಲಿಯಮ್ಸ್ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ಪ್ರತಿಭಟನೆ: ಬಿಬಿಎಂಪಿ ಸದಸ್ಯರ ಮೇಲೆ ದುಷ್ಕರ್ಮಿಗಳ ಗುಂಪು ದಾಳಿ ನಡೆಸಿರುವ ಸುದ್ದಿ ತಿಳಿಯುತ್ತಿದ್ದಂತೆ ಕಾಪೆರ್Çರೇಟರ್ ನಿವಾಸಕ್ಕೆ ದೌಡಾಯಿಸಿದ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ರಸ್ತೆತಡೆ ಮಾಡಿ ಪ್ರತಿಭಟಿಸಿದರು. ಕೂಡಲೇ ಪೊಲೀಸರು ಆರೋಪಿಗಳನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದ ಪೊಲೀಸರು ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದರು.

Facebook Comments