ಅಕ್ರಮ ಗಾಂಜಾ ವಶ

ಈ ಸುದ್ದಿಯನ್ನು ಶೇರ್ ಮಾಡಿ

GANJAಹುಣಸೂರು, ನ.7- ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಪ್ರಕರಣವನ್ನು ಭೇದಿಸಿರುವ ಹುಣಸೂರು ಗ್ರಾಮಾಂತರ ಪೊಲೀಸರು ಅರ್ಧ ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.ಗಾಂಜಾ ಬೆಳೆದಿದ್ದ ಹನಗೋಡು ಸಮೀಪದ ಕಾಳಬೂಚನಹಳ್ಳಿ ಗ್ರಾಮದ ನಿವಾಸಿ ಮಾದೇಗೌಡ ಎಂಬುವರನ್ನು ಬಂಧಿಸಲಾಗಿದೆ.
ಮಾದೇಗೌಡರ ಪುತ್ರ ಶೇಖರ್ ಎಂಬಾತ ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದಾನೆ ಎಂಬ ಬಗ್ಗೆ ಖಚಿತ ಮಾಹಿತಿಯನ್ನಾಧರಿಸಿ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‍ಐ ಶಿವಪ್ರಕಾಶ್ ನೇತೃತ್ವದ ತಂಡ ದಾಳಿ ನಡೆಸಿತು.  ದಾಳಿ ಸಂದರ್ಭದಲ್ಲಿ ಅರ್ಧ ಕೆಜಿ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡು ಜಮೀನು ಮಾಲೀಕ ಮಾದೇಗೌಡ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Facebook Comments