ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಉರುಳಿ ಬಿದ್ದು ವಿದ್ಯಾರ್ಥಿನಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

School-Bas

ಚಿಕ್ಕಮಗಳೂರು, ನ.10- ಚಾಲಕನ ನಿಯಂತ್ರಣ ತಪ್ಪಿ ಪ್ರವಾಸದ ಬಸ್ ಉರುಳಿಬಿದ್ದ ಪರಿಣಾಮ ವಿದ್ಯಾರ್ಥಿನಿ ಸಾವನ್ನಪ್ಪಿ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಳೆಕೊಪ್ಪ ಸಮೀಪ ನಡೆದಿದೆ.

ದಿಯಾ ಮೃತಪಟ್ಟ ವಿದ್ಯಾರ್ಥಿನಿ. ಭದ್ರಾವತಿಯ ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಉಡುಪಿಗೆ ತೆರಳುತ್ತಿದ್ದಾಗ ಎನ್‍ಆರ್ ಪುರ ತಾಲೂಕಿನ ಬಾಳೆಕೊಪ್ಪ ಸಮೀಪ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ.

ಅಪಘಾತದಲ್ಲಿ ಭದ್ರಾವತಿ ಮೂಲದ 10ನೆ ತರಗತಿ ವಿದ್ಯಾರ್ಥಿನಿ ದಿಯಾ ಸ್ಥಳದಲ್ಲೇ ಸಾವನ್ನಪ್ಪಿದರೆ, ಐವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದ 39 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎನ್‍ಆರ್ ಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಎರಡು ಖಾಸಗಿ ಬಸ್‍ಗಳಲ್ಲಿ ಪ್ರವಾಸಕ್ಕೆ ತೆರಳಿದ್ದು, ಒಂದೊಂದು ಬಸ್‍ನಲ್ಲಿ 45 ಜನರಿದ್ದರೆಂದು ತಿಳಿದುಬಂದಿದೆ.
ಸ್ಥಳೀಯರ ನೆರವಿನಿಂದ ವಿದ್ಯಾರ್ಥಿಗಳನ್ನು ಬಸ್‍ನಿಂದ ರಕ್ಷಿಸಲಾಗಿದೆ. ನರಸಿಂಹರಾಜಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments